ಕೋಲಾರ

ಅಪಘಾತದಲ್ಲಿ ಸಾವು: ಉದ್ರಿಕ್ತರಿಂದ ಜೀಪ್‌ಗೆ ಬೆಂಕಿ

Published On :

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆಯಿಂದ ಆಕ್ರೋಶಗೊಂಡ ಜನರು ಜೀಪ್‌ಗೆ ಬೆಂಕಿ ಹಚ್ಚಿದ ಘಟನೆ ಪೆರೆಸಂದ್ರ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತನನ್ನು ಭೂಶೆಟ್ಟಿವಾರಹಳ್ಳಿ ಶ್ರೀನಿವಾಸ್(52) ಎಂದು ಗುರುತಿಸಲಾಗಿದೆ. ಇವರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಬೈಕ್ ಮೂಲಕ ಹೋಗುತ್ತಿದ್ದರು. ಆಗ ಎದುರಿನಿಂದ ಬಂದ್ ಬಸ್ ಡಿಕ್ಕಿ ಹೊಡೆದಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಮಾಹಿತಿ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಜಮಾಯಿಸಿ, ಗಲಾಟೆ ಮಾಡಿದರು. ಅಪಘಾತಕ್ಕೆ ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಿದ್ದೇ ಕಾರಣ ಎಂದು ಜಗಳಕ್ಕೆ ನಿಂತರು. ಇಷ್ಟಕ್ಕೆ ಸುಮ್ಮನಾಗದ ಅವರು, ರಸ್ತೆ ನಿರ್ಮಾಣ ಗುತ್ತಿಗೆ ಪಡೆದಿರುವ ಕೆಎನ್‌ಆರ್ ಕನ್ಸ್‌ಟ್ರಕ್ಷನ್ ಕಂಪನಿಗೆ ಸೇರಿದ ಜೀಪ್‌ಗೆ ಬೆಂಕಿ ಹಚ್ಚಿದ್ದರಿಂದ ತ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಗ್ರಾಮಸ್ಥರನ್ನು ಸಮಾಧಾನಪಡೆಸಿದರು.

ಕ್ಷುಲ್ಲಕ ಕಾರಣಕ್ಕೆ ಕೊಲೆ: ಇಬ್ಬರ ಬಂಧನ
ಗೋಣಿಕೊಪ್ಪಲು: ವಿರಾಜಪೇಟೆ ಪೊಲೀಸ್ ಠಾಣೆಯ ಪೆರುಂಬಾಡಿ ಗ್ರಾಮದ ಇಂದ್ರ ನಗರ ಎಂಬಲ್ಲಿ ಸ್ನೇಹಿತರ ನಡುವೆ ಗುರುವಾರ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪ ಏರ್ಪಟ್ಟು ನೌಶೀರ್ (23) ಎಂಬ ಯುವಕನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಂಜೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಆರೋಪಿಗಳಾದ ವಿನಯ್ ಹಾಗೂ ಪುಷ್ಪೇಶ್ ಎಂಬವರನ್ನು ವಿರಾಜಪೇಟೆ ನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.