ಕೋಲಾರ

12 ವರ್ಷ ಬಳಿಕ ಮತ ಚಲಾಯಿಸಿದ ನಿರಾಶ್ರಿತರು!

Published On :

ಬಂಗಾರಪೇಟೆ: ತಾಲೂಕಿನ ಚಿಕ್ಕಅಂಕಂಡಹಳ್ಳಿ ಗ್ರಾಪಂ ವ್ಯಾಪ್ತಿಯ ಬೀರಂಡಹಳ್ಳಿ ಬಳಿ ಇರುವ ನಿರಾಶ್ರಿತ ಕೇಂದ್ರದಲ್ಲಿನ 70 ಜನರು ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದು ಈ ಬಾರಿಯ ಚುನಾವಣೆಯ ವಿಶೇಷವಾಗಿದೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಈ ನಿರಾಶ್ರಿತ ಕೇಂದ್ರ ಪ್ರಾರಂಭವಾಗಿ 12 ವರ್ಷಗಳಾಗಿದ್ದು ಇಂದಿನವರೆಗೂ ಯಾರ ಸಹ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರಲಿಲ್ಲ. ಆದರೆ, ಈ ಸಾರಿ ಕೇಂದ್ರದಲ್ಲಿರುವ ನಿರಾಶ್ರಿತರ ಹೆಸರನ್ನು ಮೇಲ್ವಿಚಾರಕಿ ರತ್ನಕುಮಾರಿ ಮುತುವರ್ಜಿ ವಹಿಸಿ ಮತದಾರರ ಪಟ್ಟಿಗೆ ಸೇರಿಸಿದ್ದರು. ಮೇಲ್ವಿಚಾರಕಿ ರತ್ನ ಕುಮಾರಿ ಮಾತನಾಡಿ, 'ನಮ್ಮ ನಿರಾಶ್ರಿತರ ಕೇಂದ್ರದಲ್ಲಿ ಒಟ್ಟು 100 ಮಂದಿ ಇದ್ದಾರೆ. ಭಿಕ್ಷಾಟನೆ ಮಾಡುತ್ತಿದ್ದವರನ್ನು ಇಲ್ಲಿಗೆ ತಂದು ಆಶ್ರಯ ನೀಡಲಾಗಿದೆ. ಇವರಲ್ಲಿ 30 ಮಂದಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಬಲವಾಗಿಲ್ಲ. ಹಾಗಾಗಿ ಅವರ ಹೆಸರನ್ನು ಮತಪಟ್ಟಿಗೆ ಸೇರಿಸಲಿಲ್ಲ ಎಂದರು. ಇದೇ ಮೊದಲ ಬಾರಿಗೆ ಮತ ಚಲಾಯಿಸಿ ಬಂದ ನಿರಾಶ್ರಿತರು, ವಾಹನದಲ್ಲಿ ಹೋಗಿ ವೋಟ್ ಮಾಡಿ ಬಂದಿದ್ದು ತುಂಬಾ ಖುಷಿ ಕೊಟ್ಟಿದೆ ಎಂದರು. 70 ಮಂದಿಯಲ್ಲಿ ಕನ್ನಡ, ತೆಲುಗು, ತೆಮಿಳು, ಹಿಂದಿ ಹೀಗೆ ಬೇರೆ ಬೇರೆ ಭಾಷೆ ಮಾತನಾಡುವವರು ಇದ್ದಾರೆ. ಅವರಿಗೆ ಅವರದೇ ಭಾಷೆಯಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿ ಮತದಾನ ಮಾಡಿಸಿರುವುದು ವಿಶೇಷವಾದ ಸಂಗತಿಯಾಗೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.