ಕೋಲಾರ

ಶಿಕ್ಷಣದಷ್ಟೇ ಸಂಸ್ಕಾರವೂ ಮುಖ್ಯ

Published On :

ಕೋಲಾರ: ಉತ್ತಮ ಶಿಕ್ಷಣದಷ್ಟೇ ಮಕ್ಕಳಿಗೆ ಸಂಸ್ಕಾರ ಕಲಿಸುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರ ನಿಸ್ವಾರ್ಥ ಸೇವೆ ಅಗತ್ಯ ಎಂದು ಚಿನ್ಮಯ ಮಿಷನ್ ಸ್ವಾಮಿ ಬ್ರಹ್ಮಾನಂದರು ಅಭಿಪ್ರಾಯಪಟ್ಟರು.
ಶುಕ್ರವಾರ ತಾಲೂಕಿನ ಚೊಕ್ಕಹಳ್ಳಿಯ ಚಿನ್ಮಯ ಸಾಂಧಿಪನಿ ಆಶ್ರಮದಲ್ಲಿ 2015-16ನೇ ಸಾಲಿನಿಂದ ಚಿನ್ಮಯ ಮಿಷನ್ ವತಿಯಿಂದ ಆರಂಭಿಸಲು ಉದ್ದೇಶಿಸಿರುವ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಚಿನ್ಮಯ ಮಿಷನ್ ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕಲಿಸುವ ಮೂಲಕ ಸತ್ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಸಾಮಾಜಿಕ, ಆರ್ಥಿಕ, ನೈತಿಕ ಬದುಕಿಗೆ ಶಿಕ್ಷಣ ಅತ್ಯಗತ್ಯವಾಗಿದೆ, ಕೋಲಾರ ಜಿಲ್ಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕೆಲಸವನ್ನು ಚಿನ್ಮಯ ಮಿಷನ್ ಮುಂದುವರೆಸಿಕೊಂಡು ಹೋಗುತ್ತದೆ ಎಂದರು.
ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯ 2015 ರ ಜೂನ್ ವೇಳೆಗೆ ಮುನ್ನವೇ ಪೂರ್ಣಗೊಳ್ಳಲಿದ್ದು, ವಿಜ್ಞಾನ ಮತ್ತು ವಾಣಿಜ್ಯ ಶಾಸ್ತ್ರ  ವಿಭಾಗಗಳನ್ನೊಳಗೊಂಡಂತೆ ಪದವಿ ಪೂರ್ವ ಶಿಕ್ಷಣ ನೀಡಲಾಗುತ್ತದೆ ಎಂದ ಅವರು, ಈ ಭಾಗದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಚಿನ್ಮಯ ವಿದ್ಯಾಲಯದ ಅಧ್ಯಕ್ಷ ಬಿ.ಎಸ್. ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯದರ್ಶಿ ಪಿ.ಚಂದ್ರ ಪ್ರಕಾಶ್ ಸ್ವಾಗತಿಸಿದರು. ಚಿನ್ಮಯ ಪ್ರಾಂಶುಪಾಲ ನಾರಾಯಣಸ್ವಾಮಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಚಿನ್ಮಯ ಸಾಂಧಿಪನಿ ಆಶ್ರಮದ ಸ್ವಾಮಿ ದತ್ತಪಾದಾನಂದಜಿ, ಸ್ವಾಮಿ ಆದಿತ್ಯಾನಂದ, ಸ್ವಾಮಿ ರಮಾತ್ಮಾನಂದರು, ಸುಂದರವಳ್ಳಿ, ರವಿಶಂಕರ್ ಅಯ್ಯರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.