ಬೇಸಿಗೆ ಅಥ್ಲೆಟಿಕ್ಸ್ ತರಬೇತಿ ಶಿಬಿರ
ಶಿಬಿರದಲ್ಲಿ 12 ವರ್ಷದ ಮಕ್ಕಳಿಂದ 21 ವರ್ಷ ವಯೋವಾನದ ಯುವಕರಿಗೂ ಅವಕಾಶ
ಚಿಕ್ಕಬಳ್ಳಾಪುರ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ನಿಂದ 2014ನೇ ಸಾಲಿನ 4ನೇ ವರ್ಷದ ಉಚಿತ ಬೇಸಿಗೆ ಅಥ್ಲೆಟಿಕ್ಸ್ ತರಬೇತಿ ಶಿಬಿರ ನಗರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಹಲವು ದಿನಗಳಿಂದ ನಡೆಯುತ್ತಿದೆ.
ನಗರ ಹಾಗೂ ಗ್ರಾಮೀಣ ಎರಡೂ ಪ್ರದೇಶದ ಮಕ್ಕಳಿಗೆ ಶಿಬಿರದಲ್ಲಿ ಪಾಲ್ಗೊಳ್ಳುವ ಅವಕಾಶವಿದೆಯಾದರೂ ನಗರದ ಪ್ರದೇಶದ ಮಕ್ಕಳು ಶಿಬಿರದ ಹೆಚ್ಚಿನ ಲಾಭ ಪಡೆಯುತ್ತಿದ್ದಾರೆ. ಶಿಬಿರದಲ್ಲಿ 12 ವರ್ಷದ ಮಕ್ಕಳಿಂದ 21 ವರ್ಷ ವಯೋವಾನದ ಯುವಕರಿಗೂ ಅವಕಾಶವಿದೆ. ಓಟ, ಲಾಂಗ್ ಜಂಪ್, ಹೈಜಂಪ್, ಶಾಟ್ ಪುಟ್, ಜಾವಲಿನ್ ಸೇರಿದಂತೆ ಇನ್ನಿತರ ಕ್ರೀಡೆಗಳ ಬಗ್ಗೆ ನುರಿತ ತರಬೇತುದಾರರಿಂದ ತರಬೇತಿ ನೀಡಲಾಗುತ್ತಿದೆ. ಚಿಕ್ಕಬಳ್ಳಾಪುರ ತಾಲೂಕು ಸೇರಿದಂತೆ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳ ಸುಮಾರು 50ಕ್ಕೂ ಹೆಚ್ಚು ಬಾಲಕ, ಬಾಲಕಿಯರು ಶಿಬಿರದಲ್ಲಿ ಪಾಲ್ಗೊಂಡಿದ್ದು, ಏಪ್ರಿಲ್ ತಿಂಗಳಾಂತ್ಯದವರೆಗೆ ಶಿಬಿರ ನಡೆಯುವುದರಿಂದ ಕ್ರೀಡಾಸಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಮೊಟ್ಟೆ, ಬಾಳೆ ಹಣ್ಣು, ಬ್ರಡ್, ಕೇಕ್ ಸೇರಿದಂತೆ ಪೌಷ್ಠಿಕ ಆಹಾರವನ್ನು ಉಚಿತವಾಗಿ ನೀಡಲಾಗುತ್ತಿದೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿದವರಿಗೆ ಶಿಬಿರ ಮುಕ್ತಾಯದ ಬಳಿಕ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಜತೆಗೆ ಪ್ರಮಾಣ ಪತ್ರ ನೀಡಲಾಗುತ್ತದೆ. ತರಬೇತುದಾರ ಮಂಚನಬಲೆ ಶ್ರೀನಿವಾಸ್, ಸಂಸ್ಥೆಯ ಪದಾಧಿಕಾರಿಗಳಾದ ಮಂಜುನಾಥ್, ಪ್ರಸನ್ನ, ಪ್ರವೀಣ್ ಕುಮಾರ್, ಕಾರ್ತಿಕ್, ದೇವಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

