ಕೋಲಾರದಲ್ಲಿ ಇಂದು ಕಾನೂನು ಸಾಕ್ಷರ ರಥಕ್ಕೆ ಚಾಲನೆ
ಕೋಲಾರ: ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯ ಪ್ರವಾಸದ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಏ.23ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಮಹಿಳಾ ಐಟಿಐನಲ್ಲಿ ಆಯೋಜಿಸಲಾಗಿದೆ ಎಂದು ಜಾಗೃತಿ ಸೇವಾ ಸಂಸ್ಥೆಯ ಅಧ್ಯಕ್ಷ ಕೆ.ಆರ್. ಧನರಾಜ್ ತಿಳಿಸಿದ್ದಾರೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಾಗೃತಿ ಸೇವಾ ಸಂಸ್ಥೆ ಹಾಗೂ ಗೋಕುಲ ವಿದ್ಯಾಸಂಸ್ಥೆ, ಸರ್ಕಾರಿ ಮಹಿಳಾ ಐಟಿಐಗಳ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮೊದಲಿಗೆ ಮಹಿಳಾ ಐಟಿಐನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್. ರೇಣುಕಾ ಪ್ರಸಾದ್ ಉದ್ಘಾಟಿಸುವರು.
ಐಟಿಐ ಪ್ರಾಂಶುಪಾಲ ಕೆ.ಆರ್ಮುಗಂ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಕಿಣಿಕೇರಿ, ಕೆಂಗಬಾಲಯ್ಯ, ಜಿ. ಕುಮಾರ್, ಚಿನ್ನಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಎ.ವಿ. ಆನಂದ್ ಹಾಜರಿರುವರು. ಸಂವಿಧಾನಾತ್ಮಕ ಮೂಲಭೂತ ಕರ್ತವ್ಯಗಳ ಕುರಿತು ವಕೀಲ ಕೆ.ವಿ. ಸುರೇಂದ್ರಕುಮಾರ್ ಹಾಗೂ ಮಹಿಳೆ ಮತ್ತು ಕಾನೂನುಗಳ ಬಗ್ಗೆ ವಕೀಲ ಜಿ. ಗಣೇಶ್ ಉಪನ್ಯಾಸ ನೀಡುವರು.
ಇದೇ ದಿನ ಮಧ್ಯಾಹ್ನ 2 ಗಂಟೆಗೆ ಗೋಕುಲ ಸ್ನಾತಕೋತ್ತರ ಕೇಂದ್ರದಲ್ಲಿ ನಡೆಯುವ ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ.
ಗೋಕುಲ ಸಂಸ್ಥೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ವಿ. ನಾರಾಯಣಸ್ವಾಮಿ ವಹಿಸಲಿದ್ದು, ನ್ಯಾಯಾಧೀಶರಾದ ಎಸ್. ರೇಣುಕಾಪ್ರಸಾದ್, ಸಂಗಣ್ಣ ಎಸ್ .ಪಾಟೀಲ್, ಮನಗೋಳಿ ಪ್ರೇಮಾವತಿ ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

