ಇನ್ನು ಜಿಪಂ ಅಧ್ಯಕ್ಷರ ಚುನಾವಣೆ ಕಸರತ್ತು!
ವಿಶೇಷ ವರದಿ
ಕ.ಪ್ರ. ವಾರ್ತೆ, ಕೋಲಾರ, ಏ.22
ಕೋಲಾರ ಜಿಲ್ಲಾ ಪಂಚಾಯ್ತಿಗೆ ಮೂರನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಸರ್ಕಾರ ಮೀಸಲು ಪ್ರಕಟಿಸಿದ್ದು, ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ(ಎಸ್ಸಿ) ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಎ(ಮಹಿಳೆ) ಪಾಲಾಗಿದೆ.
28 ಸದಸ್ಯರ ಬಲ ಹೊಂದಿರುವ ಜಿಪಂನಲ್ಲಿ ಜೆಡಿಎಸ್ 13, ಕಾಂಗ್ರೆಸ್ 5, ಬಿಜೆಪಿ 7 ಹಾಗೂ 3 ಪಕ್ಷೇತರ ಸದಸ್ಯರಿದ್ದಾರೆ. ಆದರೆ, ರಾಜಕೀಯ ಕಾರಣಗಳಿಂದಾಗಿ ಮೂವರು ಪಕ್ಷೇತರರು ಮೂರು ದಾರಿಯಾಗಿದ್ದಾರೆ. ಬಿಜೆಪಿಯ ಸಿಮೋಲ್ ಮೋಹನ್ ಜೆಡಿಎಸ್ಗೆ ಬೆಂಬಲ ನೀಡಿದ್ದು, ಮುಂದೆ ಯಾವ ನಿರ್ಧಾರ ಕೊಳ್ಳುತ್ತಾರೋ ಕಾದು ನೋಡಬೇಕು. ಬಿಜೆಪಿಯ ಯಲ್ಲಮ್ಮ ಕಾಂಗ್ರೆಸ್ ಸೇರಿರುವ ಮಾಜಿ ಶಾಸಕ ಕೃಷ್ಣಯ್ಯ ಶೆಟ್ಟಿ ಜೊತೆ ಗುರುತಿಸಿಕೊಂಡಿದ್ದಾರೆ. ಬಿಜೆಪಿ ಇನ್ನು ಕೆಲವು ಸದಸ್ಯರು ಸಮಯಕ್ಕೆ ತಕ್ಕಂತೆ ನಿರ್ಧಾರ ಬದಲಿಸುತ್ತಾ ಬಂದಿದ್ದಾರೆ.
ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿಗೆ ಮೀಸಲು ಆಗಿರುವುದರಿಂದ ಜೆಡಿಎಸ್ನ ಹಿರಿಯ ಸದಸ್ಯ ಎಸ್.ಬಿ.ಮುನಿವೆಂಕಟಪ್ಪ, ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಮಂಗಮ್ಮ, ಮಾಜಿ ಉಪಾಧ್ಯಕ್ಷೆ ರತ್ನಮ್ಮ, ಹಾಲಿ ಉಪಾಧ್ಯಕ್ಷೆ ಅಲುವೇಲಮ್ಮ, ಜೆಡಿಎಸ್ನ ನಿಷ್ಠಾವಂತ ಸದಸ್ಯ ಮುಳಬಾಗಿಲು ತಾಲೂಕಿನ ಕಪ್ಪಲಮಡುಗು ಶ್ರೀನಿವಾಸ್ ನಡುವೆ ಪೈಪೋಟಿ ನಡೆಯುವ ಸಾಧ್ಯತೆಗಳಿವೆ. ಬಿಜೆಪಿಯ ಯಲ್ಲಮ್ಮ ಸಹ ಕಾಂಗ್ರೆಸ್ ಬೆಂಬಲದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಗಳಿವೆ.
ಬಂಗಾರಪೇಟೆ ತಾಲೂಕಿನ ಬೂದಿಕೋಟೆಯ ಕೃಷ್ಣಪ್ಪ ಸಹ ಹಕ್ಕು ಮಂಡಿಸಬಹುದಾದರೂ ಲೋಕಸಭಾ ಚುನಾವಣೆಯಲ್ಲಿ ತಂದೆ ಮಾಜಿ ಶಾಸಕ ಸಿ.ವೆಂಕಟೇಶಪ್ಪನವರೊಂದಿಗೆ ಬಿಜೆಪಿಗೆ ಕೆಲಸ ಮಾಡಿದ್ದಾರೆಂಬ ಆರೋಪ ಹೊತ್ತಿದ್ದಾರೆ. ಹಾಗಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೃಷ್ಣಪ್ಪ ಪರ ಒಲವು ತೋರುವುದು ಅನುಮಾನ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆದ್ದರೆ ಮತ್ತೊಮ್ಮೆ ಜಿಪಂ ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸಬಹುದು. ಬಹುಮತ ಉಳಿಸಿಕೊಳ್ಳುವುದೇ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಒಂದು ವೇಳೆ ಕೆ.ಎಚ್.ಮುನಿಯಪ್ಪ ಮತ್ತೆ ಗೆದ್ದರೂ ಜಿಪಂನಲ್ಲಿ ಸಾಕಷ್ಟು ಬದಲಾವಣೆ ತಳ್ಳಿ ಹಾಕಲಾಗದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

