ಕೋಲಾರ ಜಿಲ್ಲೆಗೆ ಕೀರ್ತಿ ತರಲು ಕ್ರೀಡಾಪಟುಗಳಿಗೆ ಡಿಸಿ ರವಿ ಸಲಹೆ
ಕೋಲಾರ: ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಕ್ಕಳು ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿಗಳನ್ನು ಗಳಿಸುವ ಜೊತೆಗೆ ನಮ್ಮ ದೇಶದ ಸಾಂಸ್ಕೃತಿಕ ಹಿನ್ನೆಲೆಯನ್ನು ಪರಿಚಯಿಸುವ ಮೂಲಕ ಕೀರ್ತಿ ತಂದುಕೊಡಬೇಕೆಂದು ಜಿಲ್ಲಾಧಿಕಾರಿ ಡಿ.ಕೆ. ರವಿ ಸಲಹೆ ನೀಡಿದರು.
ಹರಿದ್ವಾರದಲ್ಲಿ ನಡೆಯುವ 12ನೇ ರಾಷ್ಟ್ರೀಯ ಅಂತರ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕೋಲಾರ ಜಿಲ್ಲೆಯ ಕ್ರೀಡಾಪಟುಗಳಿಗೆ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ನಿಂದ ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು. ಜಿಲ್ಲಾ ಮಟ್ಟದಲ್ಲಿ ಗೆದ್ದು ಹರಿದ್ವಾರಕ್ಕೆ ಪ್ರಯಾಣಿಸುವ ಉತ್ಸಾಹದಲ್ಲಿರುವಂತಹ ಕ್ರೀಡಾಪಟುಗಳು ಶಿಸ್ತು ಕಾಪಾಡುವುದರ ಮೂಲಕ ಕ್ರೀಡಾಕೂಟದಲ್ಲಿ ಶಕ್ತಿಮೀರಿ ಪ್ರಶಸ್ತಿಯನ್ನು ಪಡೆದು ಅದೇ ಉತ್ಸಾಹದಿಂದ ದೇಶಕ್ಕೆ ವಾಪಸ್ ಬರಬೇಕೆಂದು ಶುಭ ಕೋರಿದರು.
ಜಗನ್ ಮಾತನಾಡಿ, ಕಳೆದ 3 ವರ್ಷಗಳಿಂದ ಅಸೋಸಿಯೇಷನ್ ವತಿಯಿಂದ ರಾಷ್ಟ್ರೀಯ ಅಂತರ ಜಿಲ್ಲಾ ಮಟ್ಟಕ್ಕೆ ಕ್ರೀಡಾಪಟುಗಳನ್ನು ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಾ.16 ರಂದು ನಡೆದ ಕ್ರೀಡಾಕೂಟದಲ್ಲಿ 13 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. 14ಮತ್ತು 16 ವರ್ಷ ವಯೋವುತಿಯ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ ಎಂದರು.
ಸರ್ಕಾರದಿಂದ ಯಾವುದೇ ರೀತಿಯ ಅನುದಾನವಿಲ್ಲ.ಕ್ರೀಡಾಪಟುಗಳ ಹಿತದೃಷ್ಟಿಯಿಂದ ಎಲ್ಲ ವೆಚ್ಚವನ್ನು ಅಸೋಸಿಯೇಷನ್ ವತಿಯಿಂದ ಭರಿಸಲಾಗುತ್ತಿದೆ. ಕ್ರೀಡಾಪಟುಗಳಾದ ಗಣೇಶ್, ಪಳಿನಿ, ಯಶವಂತ್,ಭವನಾ, ಸಂಗೀತಾ, ಪವಿತ್ರ, ಹರೀಶ್, ಅಕ್ಷೀತ್, ಮೃತ್ಯುಂಜಯ ಮೌನಿಕ್, ಗೌತಮಿ, ಸರಿಕಾ, ಕವಿತಾ ಹರಿದ್ವಾರಕ್ಕೆ ತೆರಳುತ್ತಿದ್ದಾರೆಂದರು. ನಗರಸಭೆ ಆಯುಕ್ತ ಜಗದೀಶ್, ಜಿಲ್ಲಾ ಯುವಜನ ಕೇಂದ್ರದ ಸಹಾಯಕ ನಿರ್ದೇಶಕ ರುದ್ರಪ್ಪ, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಜಯದೇವ್, ಆಂಜಿನಪ್ಪ, ಕೋಚ್ ಶಂಕರಪ್ಪ, ರಾಜೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

