ಸ್ವಉದ್ಯೋಗ ಕೈಗೊಳ್ಳಲು ಚೆಕ್ಗಳ ವಿತರಣೆ
ಬಂಗಾರಪೇಟೆ: ಬರಗಾಲದಿಂದ ಬೆಂಡಾಗಿರುವ ಕ್ಷೇತ್ರದ ಜನರಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಸಾಲ ನೀಡುತ್ತಿದ್ದು ಇದನ್ನು ಬಳಸಿಕೊಂಡು ಹಿಂದುಳಿದ ವರ್ಗದ ನಿರುದ್ಯೋಗಿ ಯುವಕರು ಸ್ವಾವಲಂಬಿಗಳಾಗಿ ಜೀವಿಸಬೇಕೆಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ತಮ್ಮ ನಿವಾಸದಲ್ಲಿ ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ 17 ನಿರುದ್ಯೋಗಿ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನಿಗಮದಿಂದ ನೇರ ಸಾಲ ಯೋಜನೆಯಲ್ಲಿ ಚೆಕ್ಗಳನ್ನು ವಿತರಿಸಿ ಮಾತನಾಡಿದ ಶಾಸಕರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗುತ್ತಿದೆ. ಈ ವರ್ಷದಲ್ಲಿ ಸಾವಿರಾರು ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗಕ್ಕಾಗಿ ಕೋಟ್ಯಂತರ ರು. ಸಾಲ ನೀಡಲಾಗಿದೆ. ಇದರಿಂದ ಅವರು ಯಾರ ಹಂಗಿಲ್ಲದೆ ಸ್ವಾವಲಂಭಿಗಳಾಗಿ ಬದುಕುವಂತೆ ಉತ್ತೇಜನ ನೀಡಲಾಗಿದೆ.
ಕ್ಷೇತ್ರ 9 ವರ್ಷಗಳಿಂದ ಬರದಿಂದ ಬಸವಳಿದಿದೆ, ಕುಡಿಯಲು ನೀರಿಗಾಗಿ ಅಭಾವ ನಿರ್ಮಾಣವಾಗಿದೆ. ಇದನ್ನು ನಿವಾರಿಸಲು ಸರ್ಕಾರ ಎಲ್ಲಾ ನೆರವು ನೀಡಿದೆ ಆದರೆ ಕೆಲವು ಕಡೆ ಅಂತರ್ಜಲ ಮಟ್ಟ ಮಿತಿ ಮೀರಿ ಕುಸಿದಿರುವುದರಿಂದ ಸಮಸ್ಯೆ ನಿವಾರಣೆಗೆ ಅಡ್ಡಿಯಾಗಿದೆ. ಪದೇ ಪದೆ ಈ ಸಮಸ್ಯೆ ಬಾರದಂತೆ ಶಾಶ್ವತ ನೀರಾವರಿ ಯೋಜನೆ ತರಲು ಸರ್ಕಾರ ಮುಂದಾಗಿದೆ ಈಗಾಗಲೇ ಎತ್ತಿನ ಹೊಳೆ ಕಾಮಗಾರಿಗೆ ಶಂಕುಸ್ಥಾಪನೆ ಪೂರ್ಣಗೊಳಿಸಿದ್ದು, ನಾಲ್ಕು ತಾಲೂಕಿಗೆ ಅನುಕೂಲವಾಗುವ ಯರಗೋಳ್ ಯೋಜನೆ ಕಾಮಗಾರಿ ಸಹ ಪ್ರಾರಂಭವಾಗಿದೆ. ನಾನು ಅಧಿಕಾರದಿಂದ ಕೆಳಗಿಳಿಯುವ ವೇಳೆಗೆ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲು ನಿರ್ಗಮಿಸುವುದಾಗಿ ಶಪಥ ಮಾಡಿದರು. ಆದರೆ ವಿಪಕ್ಷಗಳು ಅಭಿವೃದ್ಧಿ ಕಾಮಗಾರಿಗಳಲ್ಲಿ ಕೈಜೋಡಿಸದೆ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು. ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಎಪಿಎಂಸಿ ನಿರ್ದೇಶಕ ಜೋತನಹಳ್ಳಿ ರಾಮಪ್ಪ, ಎಸ್.ಎಂ. ಗೋಪಾಲ್,ಕುಂಬಾಲಪಾಳ್ಯ ಮಂಜುನಾಥ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

