ಕೋಲಾರ

ಪ್ರತ್ಯೇಕ ಘಟನೆ: ರೈಲಿಗೆ ಸಿಲುಕಿ ಇಬ್ಬರು ಸಾವು

Published On :

ಬಂಗಾರಪೇಟೆ: ಪ್ರತ್ಯೆಕ ಘಟನೆಗಳಲ್ಲಿ ಇಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ತಾಲೂಕಿನ ದಾಸರಹೊಸಹಳ್ಳಿ ಗ್ರಾಮದ ಜೆಸಿಂತಾ(58) ಎಂಬುವರೇ ಪಟ್ಟಣದಿಂದ ಬೆಂಗಳೂರಿಗೆ ಹೋಗುವ ಫುಷ್‌ಫುಲ್ ರೈಲು ಚಲಿಸುತ್ತಿದ್ದಾಗ ಹತ್ತಲು ಹೋಗಿ ರೈಲಿನ ಚಕ್ರಕ್ಕೆ ಸಿಲುಕಿ ಮೃತಪಟ್ಟ ದುರ್ದೈವಿಯಾಗಿದ್ದು.ಬುಧವಾರ ಮಧ್ಯಾಹ್ನ ಪಟ್ಟಣದಿಂದ ಬೆಂಗಳೂರಿಗೆ ಹೋಗುವ ಸಲುವಾಗಿ ಜೆಸಿಂತಾ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಂತೆ ಫುಷ್‌ಫುಲ್ ರೈಲು ಚಲಿಸುತ್ತಿದ್ದ ವೇಳೆ ಹತ್ತಲು ಹೋಗಿ ಜೆಸಿಂತಾ ಕೆಳಗೆ ಉರುಳಿದ್ದರಿಂದಾಗಿ ತೀವ್ರ ಗಾಯಗೊಂಡಿದ್ದಾರೆ. ನಂತರ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ರೈಲುನಿಲ್ದಾಣದ ಹೊರವಲಯದ ವರದಾಪುರ ಗೇಟ್ ಬಳಿ ಚಲಿಸುವ ರೈಲಿಗೆ ಅಪರಿಚಿತ ವ್ಯಕ್ತಿಯೊಬ್ಬ ಸಿಲುಕಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನೆಡದಿದೆ. ಮೃತನ ವಯಸ್ಸು 35 ವರ್ಷದವನಾಗಿದ್ದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಘಟನೆಯೋ ಎಂಬುದು ತಿಳಿದಿಲ್ಲ. ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತನಿಖೆಯನ್ನು ಕೈಗೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.