ವಿದ್ಯುತ್ ಅವಘಡಕ್ಕೆ ವ್ಯಕ್ತಿ ಸಾವು: ಪ್ರತಿಭಟನೆ
ಕ.ಪ್ರ.ವಾರ್ತೆ ್ಣ ಹುಣಸೂರು ್ಣ ಏ. 23
ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವ ವೇಳೆ 11 ಕೆ.ವಿ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಕಂಬದಲ್ಲೆ ಮೃತಪಟ್ಟ ಘಟನೆ ತಾಲೂಕಿನ ಅರಸು ಕಲ್ಲಹಳ್ಳಿಯಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಆಡಿಗನಹಳ್ಳಿಯ ಪುಟ್ಟಣ್ಣಯ್ಯ ಪುತ್ರ ರವೀಶ್(28) ಮೃತ ಕಾರ್ಮಿಕ. ಗ್ರಾಮದ ರಾಜು ಎಂಬುವರು ತಮ್ಮ ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಪಡೆಯಲು ರವೀಶ್, ಬಸವರಾಜು, ಮಹೇಶ ಅವರಿಂದ ಕೆಲಸ ಮಾಡಿಸುತ್ತಿದ್ದರು. ಈ ವೇಳೆ 11 ಕೆ.ವಿ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸದೆ ಕಂಬದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ರವೀಶನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆದ ನಂತರ ಮಾಲೀಕ ರಾಜು ಹಾಗೂ ರವೀಶನ ಸಹ ಕೆಲಸಗಾರರಾದ ಮಹೇಶ, ಬಸವರಾಜು ಸ್ಥಳದಿಂದ ಪರಾರಿ ಆಗಿದ್ದಾರೆ. ಈ ಬಗ್ಗೆ ರವೀಶನ ಕುಟುಂಬದವರು ಪೊಲೀಸರು ಹಾಗೂ ಸೆಸ್ಕ್‌ಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಶವವನ್ನು ಕಂಬದಿಂದ ಕೆಳಗಿಳಿಸಿದರು. ಈ ವೇಳೆಗೆ ಗ್ರಾಮಸ್ಥರು ಮೃತ ರವೀಶನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮರಣೋತ್ತರ ಪರೀಕ್ಷೆಗೆ ಶವ ಸಾಗಿಸಲು ಅವಕಾಶ ನೀಡದೆ ಪ್ರತಿಭಟಿಸಿದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಗ್ರಾಮಸ್ಥರನ್ನು ಸಮಾಧಾನಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

