ಕೋಲಾರ

ಶಾಲೆಯ ಸಂಪ್‌ಗೆ ಬಿದ್ದು ಮಗು ಸಾವು

Published On :

ಶಿಡ್ಲಘಟ್ಟ: ಆಟವಾಡಲು ಹೋದ ಬಾಲಕನೊಬ್ಬ ಸರ್ಕಾರಿ ಶಾಲೆಯ ಆವರಣದಲ್ಲಿದ್ದ ನೀರಿನ ಸಂಪಿನಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲೂಕಿನ ಪಲಿಚೇಲು ಗ್ರಾಪಂ ವ್ಯಾಪ್ತಿಯ ದೂಗರನಾಯಕನಹಳ್ಳಿ ಗ್ರಾಮದ ಆನಂದ್ (8) ಮೃತಪಟ್ಟಿರುವ ದುರ್ದೈವಿ. ಶಾಲೆಗೆ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಆಟವಾಡಲು ಹೋಗಿದ್ದಾಗ ಸರ್ಕಾರಿ ಶಾಲೆಯ ಆವರಣದಲ್ಲಿದ್ದ ನೀರಿನ ಸಂಪಿನಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಕೂಡಲೇ ಮೇಲಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಮೃತ ಬಾಲಕನನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲು ಗ್ರಾಮಸ್ಥರು ಹಾಗೂ ಕುಟುಂಬದವರು ನಿರಾಕರಿಸಿದ್ದರಿಂದ ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣೆಯ ಪಿಎಸ್‌ಐ ಪಿ.ಬಿ. ಹನುಮಂತಪ್ಪ ಗ್ರಾಮಸ್ಥರ ಮನವೊಲಿಸಿ ಮರಣೋತ್ತರ ಪರೀಕ್ಷೆ ನಡೆಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಬಾಲಕನ ತಂದೆ ಅಂಧರಾಗಿದ್ದು ಕುಟುಂಬದಲ್ಲಿ ದುಃಖ ಮಡುಗಟ್ಟಿದ್ದು, ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.