ಕೋಲಾರ

'ಗ್ರಾಮಗಳಿಗೆ ನೀರು ಒದಗಿಸಿ'

Published On :

ಕೋಲಾರ: ಜಿಲ್ಲೆಯಲ್ಲಿ ಕುಡಿಯಲು ನೀರಿನ ಸಮಸ್ಯೆ ಹೆಚ್ಚಿರುವ ಗ್ರಾಮಗಳಿಗೆ ನೀರು ಒದಗಿಸಲು ಶೀಘ್ರವೇ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಡಿ ಎಂದು ಜಿಲ್ಲಾಧಿಕಾರಿ ಡಿ.ಕೆ. ರವಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅವರು ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ಪರಿಸ್ಥಿತಿ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡಿ, ಏ.29 ರಂದು ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಶಾಸಕರು, ಜಿಪಂ, ತಾಪಂ ಹಾಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ ಸಭೆ ಕರೆಯಲಾಗಿದ್ದು, ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜನಪ್ರತಿನಿಧಿಗಳ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ಬರದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಲ್ಲಾ ತಹಸೀಲ್ದಾರ್‌ಗಳಿಗೆ, ಜಿಪಂ ಇಇ, ಎಇಇಗಳಿಗೆ ಹಾಗೂ ತಾಪಂ ಇಒಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲೆಯ ಆರು ಸ್ಥಳಿಯ ಸಂಸ್ಥೆಗಳ 97 ವಾರ್ಡ್‌ಗಳಿಗೆ 107 ಟ್ಯಾಂಕರ್‌ಗಳಲ್ಲಿ ಪ್ರತಿ ನಿತ್ಯ 535 ಟ್ರಿಪ್ ಹಾಗೂ ಗ್ರಾಮೀಣ ಭಾಗದಲ್ಲಿ 87 ಟ್ಯಾಂಕರ್‌ಗಳಲ್ಲಿ 248 ಟ್ರೀಪ್ ಮತ್ತು ರೈತರ ಖಾಸಗಿ 33 ಕೊಳವೆ ಬಾವಿಗಳಿಂದ ನೀರು ಸರಬರಾಜು ಮಾಡುತ್ತಿರುವ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ನೋಟಿಸ್ ಜಾರಿ: ಬಂಗಾರಪೇಟೆ ತಹಸೀಲ್ದಾರ್ ಅವರು ಸಭೆಗೆ  ಗೈರುಹಾಜರಾಗಿರುವ ಬಗ್ಗೆ ಅಸಮಾಧಾನಗೊಂಡ ಜಿಲ್ಲಾಧಿಕಾರಿಗಳು ಶೋಕಾಸ್ ನೋಡಿಸ್ ಜಾರಿ ಮಾಡುವಂತೆ ಸೂಚಿಸಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರತಿ ಟ್ಯಾಂಕರ್‌ಗೆ 500ರಿಂದ 700ರು. ಮೇಲ್ಪಟ್ಟು ಕೇಳುತ್ತಿರುವ ಬಗ್ಗೆ ಇಒ, ಜಿಪಂ ಎಇಇ ಸಭೆಯ ಗಮನಕ್ಕೆ ತಂದಾಗ ಸರ್ಕಾರ  5ಕಿಮೀ ಒಳಗಿದ್ದರೆ 325 ಹಾಗೂ 5 ಕಿಮೀ ಹೆಚ್ಚಿದ್ದಲ್ಲಿ 350 ರು. ನಿಗದಿಪಡಿಸಿದೆ. ಇದಕ್ಕಿಂತ ಹೆಚ್ಚುವರಿ ಹಣ ನೀಡಿದ್ದಲ್ಲಿ ತಾವು ಹಣ ಪಾವತಿಸಲು ಬರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ5 ಕಿಮೀ ದೂರದಿಂದ ನೀರು ಸರಬರಾಜು ಮಾಡುತ್ತಿದ್ದಲ್ಲಿ 450 ಹಾಗೂ 5 ಕಿಮೀ ಗಿಂತ ಹೆಚ್ಚಿದ್ದಲ್ಲಿ 500 ರು. ದರ ನಿಗದಿಪಡಿಸಿದ ಜಿಲ್ಲಾಧಿಕಾರಿಗಳು, ಖಾಸಗಿ ಕೊಳವೆ ಬಾವಿಗಳಿಂದ 2ಕಿಮೀ ಒಳಗೆ ನೀರು ಪಡೆದರೆ ಮಾಸಿಕ 10 ಸಾವಿರ ರು ಹಾಗೂ 2 ಕಿ.ಮೀ ದೂರದಿಂದ ನೀರು ಪಡೆಯುತ್ತಿದ್ದಲ್ಲಿ 8 ಸಾವಿರ ರು. ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಜಿಪಂ ಸಿಇಒ ಆರ್. ವಿನೋತ್ ಪ್ರಿಯಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.