ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಕೋಲಾರ: ಜಾನುವಾರುಗಳ ವ್ಯಾಪಾರದಲ್ಲಿ ತೊಡಗಿಕೊಂಡಿದ್ದ ಕಬೀರ್ ಎಂಬ ಮಂಗಳೂರಿನ ಯುವಕನೊಬ್ಬನನ್ನು ಶೃಂಗೇರಿ ತಾಲೂಕು ತನಿಕೋಡು ಅರಣ್ಯ ಪ್ರದೇಶದಲ್ಲಿ ಏ.19 ರಂದು ನಕ್ಸಲ್ ನಿಗ್ರಹ ಪಡೆಯವರು ಗುಂಡು ಹಾರಿಸಿ ಕೊಂದಿರುವ ಘಟನೆಯನ್ನು ಖಂಡಿಸಿ ಡಿವೈಎಫ್ಐ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಈ ಘಟನೆಯನ್ನು ಸಿಬಿಐ ತನಿಖೆಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕೆಂದು ಸಂಘಟನೆಯ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಬೀರ್ ಮತ್ತು ಆತನ ಜೊತೆಗಿದ್ದವರು ತೀರ್ಥಹಳ್ಳಿಯಲ್ಲಿ ಜಾನುವಾರುಗಳನ್ನು ಖರೀದಿಸಿ ಮಂಗಳೂರಿಗೆ ಸಾಗಿಸುತ್ತಿದ್ದರು. ಜಾನುವಾರುಗಳ ಸಾಗಾಟಕ್ಕೆ ಅಗತ್ಯ ದಾಖಲೆಗಳು ಇವರ ಬಳಿಯಲ್ಲಿ ಇದ್ದವು. ಅವರು ಇತರ ಅರಣ್ಯ ತಪಾಸಣಾ ಠಾಣೆಗಳಲ್ಲಿ ದಾಖಲೆಗಳನ್ನು ತೋರಿಸಿ ಬಂದಿದ್ದರು. ಆದರೆ ಶಣಂಗೇರಿ ಬಳಿಯಲ್ಲಿ ನಕ್ಸಲ್ ನಿಗ್ರಹ ಪಡೆಯ ಯೋಧರು ಸ್ಥಳೀಯ ಬಲಪಂಥೀಯ ಸಂಘಟನೆಯ ಕುಮ್ಮಕ್ಕಿನಿಂದ ಅಮಾಯಕನ ಹತ್ಯೆ ಮಾಡಿದ್ದಾರೆ. ಗಾಯಗೊಂಡ ಸರ್ಪರಾಜ್ ನಾಪತ್ತೆಯಾಗಿದ್ದಾನೆ. ಕಬೀರ್ ಮೃತದೇಹವನ್ನು ಕೊಂಡೊಯ್ಯಲು ಬಂದಿದ್ದ ಆತನ ಸಂಬಂಧಿಗಳ ಬಾಡಿಗೆ ವಾಹನವನ್ನು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಜಖಂಗೊಳಿಸಿ, ಅದರಲ್ಲಿದ್ದವರ ಮೇಲೆ ಪೊಲೀಸರ ಸಮ್ಮುಖದಲ್ಲೇ ಹಲ್ಲೆ ಮಾಡಿದ್ದನ್ನು ಗಮನಿಸಿದರೆ ಈ ಘಟನೆಯಲ್ಲಿ ಹಿಂದೂಪರ ಸಂಘಟನೆಯ ಕೈವಾಡವಿರುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದ್ದಾರೆ.
ಪ್ರಕರಣದ ತನಿಖೆಮಾಡಲು ಸಿಐಡಿಗೆ ಒಪ್ಪಿಸಲಾಗಿದೆಯೆಂದೂ, ಹಿಂದೂ ಪರ ಸಂಘಟನೆಯ ಕೆಲವು ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತದೆ ಎಂದು ರಾಜ್ಯ ಗೃಹಖಾತೆ ಸಚಿವರು ಹೇಳಿಕೆ ನೀಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸಲು ಸಿಐಡಿ ವರದಿಗೆ ಕಾಯಬೇಕಾಗಿಲ್ಲ. ಕೂಡಲೇ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

