ಕೊಳೆತ ಸ್ಥಿತಿಯಲ್ಲಿ ಎರಡು ಶವ ಪತ್ತೆ
ಚಿಂತಾಮಣಿ: ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಏಟಗೊಲ್ಲಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕ ಮತ್ತು ವಿವಾಹಿತ ಮಹಿಳೆ ಸೇರಿದಂತೆ ಎರಡು ಶವಗಳು ಪತ್ತೆಯಾಗಿವೆ.
ಮೃತಪಟ್ಟವರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಗ್ರಾಮಕ್ಕೆ ಸಮೀಪದಲ್ಲಿ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿ ಗ್ರಾಮಸ್ಥರು ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ಎರಡು ಶವಗಳು ಪತ್ತೆಯಾಗಿವೆ. ಈ ಸುದ್ದಿ ತಿಳಿಯುತ್ತಿದ್ದಂತೆ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮಹಿಳೆಗೆ 33 ವರ್ಷದವಳಾಗಿದ್ದು, ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಯುವಕ ವಿವಾಹಿತ ಮಹಿಳೆಯನ್ನು ಇಲ್ಲಿಗೆ ಕರೆದುಕೊಂಡು ಬಂದು ಕತ್ತು ಹಿಸುಕಿ ಸಾಯಿಸಿದ್ದಾನೆ. ಆ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವಕನ ಅಂಗಿಯ ಮೇಲೆ ಆಂಧ್ರ ಪ್ರದೇಶದ ಬಿ.ಕೊತ್ತಕೋಟ ವಿಳಾಸವಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

