ಪೊಲೀಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಚಿಂತಾಮಣಿ: ಪಿಎಸ್ಐ ನೀಡುತ್ತಿರುವ ಕಿರುಕುಳ ತಾಳಲಾರದೇ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ತನ್ನ ಗಂಡನ ಸಾವಿಗೆ ಕಾರಣರಾದ ಪಿಎಸ್ಐ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಎಂ.ಮೀನಾಕ್ಷಿ ಆಗ್ರಹಿಸಿದ್ದಾರೆ.
ಶಾಂತಿನಗರದ ನಿವಾಸಿ ಕೆ.ವಿ.ಮಂಜುನಾಥ್(40) ಮೃತ ವ್ಯಕ್ತಿ. ಇವರು ಕಾಗತಿ ಗ್ರಾಮದ ಮುನಿಯಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ನೇಣು ಹಾಕಿಕೊಂಡಿದ್ದಾರೆ. ಈ ವಿಷಯವನ್ನು ನೆರೆ ಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಿಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತನ ಜೇಬಿನಲ್ಲಿ ಪತ್ರ ದೊರೆತಿದ್ದು, ನನ್ನ ಸಾವಿಗೆ ಪಿಎಸ್ಐ ಮುರಳಿ ಕಾರಣ ಎಂದು ಬರೆದಿದ್ದಾರೆ ಎನ್ನಲಾಗಿದೆ. ಶವವನ್ನು ಪರೀಕ್ಷೆಗಾಗಿ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದೆ. ಸುದ್ದಿ ತಿಳಿದ ಮೃತನ ಸಂಬಂಧಿಕರು, ಗ್ರಾಮಸ್ಥರು ಆಸ್ಪತ್ರೆ ಆವರಣದಲ್ಲಿ ಜಮಾವಣೆಗೊಂಡು ಪೋಲೀಸ್ ಅಧಿಕಾರಿ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಪಟ್ಟು ಹಿಡಿದರು.
ಪಿಎಸ್ಐ ಕಾರಣ: ನಗರ ಠಾಣೆಯ ಪಿಎಸ್ಐ ಮುರುಳಿ ಚುನಾವಣೆ ಮುನ್ನ ತಮ್ಮ ಪತಿ ಮೇಲೆ ಇಲ್ಲ ಸಲ್ಲದ ಕೇಸ್ಗಳನ್ನು ಹಾಕಿ, ರೌಡಿಶೀಟರ್ಗೆ ಹೆಸರು ಸೇರಿಸಿದ್ದಾರೆ ಎಂದು ಮೀನಾಕ್ಷಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅನೇಕ ಸಾರಿ ನನ್ನ ಗಂಡನನ್ನು ಠಾಣೆ ಕರೆಯಿಸಿಕೊಂಡು ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ, ಲಂಚ ನೀಡಬೇಕೆಂದು ಪದೆ ಪದೆ ಪೀಡಿಸುತ್ತಿದ್ದರು. ಕೊಡದಿದ್ದರೆ ಎನ್ಕೌಂಟರ್ ಮಾಡಿ ಸಾಯಿಸುತ್ತೇನೆ ಎಂದು ಹೆದರಿಸುತ್ತಿದ್ದರು ದೂರಿನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

