ಕೋಲಾರ

ರೈತ ಸಂಘದಿಂದ ಪರಿಸರ ಸಂರಕ್ಷಣಾ ಘಟಕ ಶುರು

Published On :

ಚಿಕ್ಕಬಳ್ಳಾಪುರ: ರೈತರ ಪರವಾಗಿ ಅನೇಕ ಹೋರಾಟಗಳನ್ನು ನಡೆಸಿಕೊಂಡು ಬಂದಿರುವ ನಮ್ಮ ಸಂಘದಿಂದ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ನೂತನವಾಗಿ ಪರಿಸರ ಸಂರಕ್ಷಣಾ ಘಟಕವನ್ನು ರಚನೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ಜಿಲ್ಲಾಧ್ಯಕ್ಷ ಟಿ.ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.
ನಗರದ ಸಿಟಿಜನ್ ಕ್ಲಬ್ ನಲ್ಲಿ ಪರಿಸರ ಸಂರಕ್ಷಣಾ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆಯ ಘೋಷಣೆ ಮಾಡಿ ಮಾತನಾಡಿದ ಅವರು, 'ಪ್ರಸ್ತುತ ಪರಿಸರ ಸಂರಕ್ಷಣೆಗಾಗಿ ಹೆಚ್ಚಿನ ಒತ್ತು ಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲು ಪರಿಸರ ಸಂರಕ್ಷಣಾ ಘಟಕ ಬದ್ಧವಾಗಿದೆ' ಎಂದರು.
ಘಟಕದ ಗೌರವಾಧ್ಯಕ್ಷರಾಗಿ ರಘುವೀರಸ್ವಾಮಿ, ಜಿಲ್ಲಾಧ್ಯಕ್ಷರಾಗಿ ವಿನೋದ್ ಮಿತ್ರ ಗೌಡ, ಜಿಲ್ಲಾ ಮಹಿಳಾ ಅಧ್ಯಕ್ಷರಾಗಿ ಪಲ್ಲವಿ ರಮೇಶ್, ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ರಂಜಿತ್ ಗೌಡ ಮತ್ತು ಬಾಗೇಪಲ್ಲಿ ಅಧ್ಯಕ್ಷರಾಗಿ ಎಸ್.ಪಿ.ಗಿರೀಶ್ ಮತ್ತು ರೈತ ಸಂಘದ ಜಿಲ್ಲಾ ಕಾನೂನು ಸಲಹೆಗಾರರನ್ನಾಗಿ ಆರ್.ನಂಜೇಶ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಎಂದರು. ಸಭೆಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಆರ್.ಲಕ್ಷ್ಮೀನಾರಾಯಣ್, ಸಹ ಕಾರ್ಯದರ್ಶಿ ರೆಡ್ಡಪ್ಪ, ಸಂಘಟನಾ ಕಾರ್ಯದರ್ಶಿ ವೆಂಕಟೇಶಪ್ಪ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.