ನಿರ್ಲಕ್ಷ್ಯವೇ ಕಾರಣ
ಚಿಕ್ಕಬಳ್ಳಾಪುರ: ಕುಡಿಯುವ ನೀರಿನ ಸಮಸ್ಯೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಬಿಟ್ಟಿಲ್ಲ. ಕೊಳವೆ ಬಾವಿಗಳನ್ನು ಕೊರೆಸಿ ಮೂರ್ನಾಲ್ಕು ತಿಂಗಳಾದರೂ ಪಂಪು ಮೋಟಾರ್ ಅಳವಡಿಸಿ ವಿದ್ಯುತ್ ಸಂಪರ್ಕ ಕೊಟ್ಟು ನೀರು ಸರಬರಾಜು ಮಾಡುತ್ತಿಲ್ಲ. ಇದರಿಂದ ಅನೇಕ ಕಡೆ ಕೊಳವೆ ಬಾವಿಗಳಲ್ಲಿ ನೀರು ಲಭ್ಯವಾದರೂ ಪ್ರಯೋಜನವಿಲ್ಲದಂತಾಗುತ್ತಿದೆ.
ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶಾಸಕ ಡಾ.ಕೆ. ಸುಧಾಕರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಪಂ ಕಾರ್ಯದರ್ಶಿ ಮತ್ತು ಬೆಸ್ಕಾಂ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಂಡಿತು. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವುದರ ಬಗ್ಗೆ ಮಾಹಿತಿ ಕೇಳುತ್ತಿದ್ದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳ ಪಟ್ಟಿಯನ್ನು ನೀಡುತ್ತ ಹೋದರು. ತಾಲೂಕಿನ ಅಂದಾರ್ಲಹಳ್ಳಿ, ಅಂಗಟ್ಟ, ಅರೂರು, ಕುಪ್ಪಹಳ್ಳಿ, ಪುಟ್ಟತಿಮ್ಮನಹಳ್ಳಿ, ಚೊಕ್ಕಹಳ್ಳಿ, ಹೀರೇಹಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ತೀವ್ರ ಸಮಸ್ಯೆ ಇದೆ. ತುರ್ತಾಗಿ ಕೊಳವೆ ಬಾವಿಯನ್ನು ಕೊರೆಸಬೇಕೆಂದು ಮನವಿ ಮಾಡಿದರು.
ಖಾಲಿ ಬಿಂದಿಗೆಗಳ ಸ್ವಾಗತ: ಹಿಂದೆ ಗ್ರಾಮಗಳಿಗೆ ಜನಪ್ರತಿನಿಧಿಗಳು ತೆರಳಿದಾಗ ಅರತಿ ಎತ್ತಿ ಭವ್ಯ ಸ್ವಾಗತ ಕೋರುತ್ತಿದ್ದವರು. ಇದೀಗ ಎಲ್ಲಾ ಕಡೆ ಖಾಲಿ ಬಿಂದಿಗೆಗಳನ್ನು ಹಿಡಿದು ಆಕ್ರೋಶದಲ್ಲಿ ಸ್ವಾಗತ ಕೋರುತ್ತಿದ್ದಾರೆ. ಸುಮ್ಮನೆ ಕಡತದಲ್ಲಿ ಸಮಸ್ಯೆಗಳಿಗೆ ಪರಿಹಾರ ತೋರಿಸುವುದರ ಬದಲು ಕೆಲಸ ಮಾಡಿ ಎಂದು ಶಾಸಕ ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊಳವೆ ಬಾವಿಗಳಿಗೆ ಬೆಸ್ಕಾಂ ಇಲಾಖೆ ತಕ್ಷಣ ಸರ್ವೀಸ್ ಕೊಡದೇ ಇರುವುದರ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು ಮುಂದೆ ಇಂತಹ ವರ್ತನೆ ಸಹಿಸುವುದಿಲ್ಲ. ಬೆಸ್ಕಾಂ ಇಲಾಖೆಗೆ ಪಾವತಿಸಬೇಕಾದ ಶುಲ್ಕ ಬೇಕಾದರೆ ಮುಂಗಡವಾಗಿಯೇ ಪಾವತಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳನ್ನು ಕೋರುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

