ರಸ್ತೆ ಕಾಮಗಾರಿಗೆ ಒತ್ತಾಯ
ಕೋಲಾರ: ರಸ್ತೆ ಅಗಲೀಕರಣದ ನಂತರ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ, ಕೋಲಾರ ತಾಲೂಕಿನ ಖಾದ್ರಿಪುರ, ಕಾರಂಜಿಕಟ್ಟಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ನಗರದ ಖಾದ್ರಿಪುರದ ಬಳಿ 30 ಅಡಿ ರಸ್ತೆಯ ಅವಶ್ಯಕತೆಯಿದ್ದು, ಸಂಬಂಧಪಟ್ಟ ಇಲಾಖೆಯವರು ಕೇವಲ 18 ಅಡಿ ರಸ್ತೆ ನಿರ್ಮಾಣ ಮಾಡಿರುವುದರಿಂದ ವಾಹನಗಳ ಓಡಾಡಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು ರಸ್ತೆ ಅಗಲೀಕರಣದ ನಂತರ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಆರಂಭಿಸಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರೂ ಸಹ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ದೂರಿದರು. ಗುತ್ತಿಗೆದಾರ ಮುನಿರಾಜು ಅವರು ಎರಡು ಬದಿಯಿಂದ ರಸ್ತೆಯನ್ನು ಅಳತೆ ಮಾಡಿ ರೇಲ್ವೆ ಇಲಾಖೆಯ ಎಂಜನಿಯರ್ಗಳ ಗಮನಕ್ಕೆ ತಂದು, ರಸ್ತೆ ಅಗಲೀಕರಣಕ್ಕೆ ಒಪ್ಪಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಗ್ರಾಮಸ್ಥರು ಕೈಬಿಟ್ಟರು.
ಪ್ರತಿಭಟನೆಯ ನೇತೃತ್ವವನ್ನು ಖಾದ್ರಿಪುರ ಗ್ರಾಪಂ ಸದಸ್ಯ ರಾಜೇಶ್, ನಿರಂಜನ್, ರವಿ, ಅಂಬರೀಶ್, ಹರಿಕೃಷ್ಣ, ಶಿವರಾಜ್, ಮುನಿಯಪ್ಪ, ಬಾಬು, ಸಿಂಗ್ ಮತ್ತಿತರರು ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

