ಕೋಲಾರ

ಕುಡಿವ ನೀರಿಗೆ ಆಗ್ರಹಿಸಿ ಪ್ರತಿಭಟನೆ

Published On :

ಗುಡಿಬಂಡೆ: ತಾಲೂಕಿನ ಬೀಚಗಾನಹಳ್ಳಿ ಕ್ರಾಸ್‌ನಲ್ಲಿ 25 ದಿನಗಳಿಂದ ನೀರು ಪೂರೈಸುತ್ತಿಲ್ಲವೆಂದು ಆರೋಪಿಸಿ ಗ್ರಾಮದ ಮಹಿಳೆಯರು ಪಟ್ಟಣದ ಜಿಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಗ್ರಾಮದಲ್ಲಿ ಹಲವು ದಿನಗಳಿಂದ ನೀರಿನ ಅಭಾವ ಕಾಡುತ್ತಿದ್ದು, ಈ ಬಗ್ಗೆ ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ ಮಾಡಿದರೂ ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯತೆ ತೋರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಮತ್ತು ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು. ಈ ವೇಳೆ ಜೆ.ಪಿ ನಗರದ ಮಾರಪ್ಪ, ಪೆಮ್ಮರೆಡ್ಡಿ, ನಾರಾಯಣಸ್ವಾಮಿ, ಶ್ರೀನಿವಾಸ.ಆರ್, ಮಹದೇವಮ್ಮ, ನರಸಮ್ಮ, ವೆಂಕಟಮ್ಮ, ಗಂಗಮ್ಮ, ಆದಿಲಕ್ಷ್ಮಮ್ಮ, ಈಶ್ವರಮ್ಮ, ಲಕ್ಷ್ಮಮ್ಮ ಸೇರಿದಂತೆ ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.