ಕುಡಿವ ನೀರು ಕಾಮಗಾರಿಗೆ ಅಡ್ಡಿಪಡಿಸಿದ್ರೆ ಜೈಲಿಗೆ ಕಳುಹಿಸಿಹಲವಡೆ ಕೊಳವೆಬಾವಿಗಳಿಗೆ ವಿದ್ಯುತ್ ಪೂರೈಕೆಯೇ ಇಲ್ಲಪಿಡಿಒಗಳ ಬೇಜವಾಬ್ದಾರಿಯಿಂದ ಸಮಸ್ಯೆ ಮತ್ತಷ್ಟು ಜಟಿಲ
ಸೋಮವಾರ ಕೋಲಾರದಲ್ಲಿ ಶ್ರೀನಿವಾಸಪುರ ಶಾಸಕ ರಮೇಶಕುಮಾರ್, ಚಿಕ್ಕಬಳ್ಳಾಪುರದಲ್ಲಿ ಶಾಸಕ ಕೆ. ಸುಧಾಕರ್, ಬಂಗಾರಪೇಟೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರು ಪೂರೈಕೆ ಸಂಬಂಧ ಕಟ್ಟು ನಿಟ್ಟಾದ ಸೂಚನೆಗಳನ್ನು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ರಾಜಿಯಾಗದಂತೆ ಸೂಚಿಸಿದ್ದಾರೆ. ಸಮಸ್ಯೆಗಳು ಉಲ್ಬಣಗೊಳ್ಳದಂತೆ ಅಧಿಕಾರಿಗಳು ಕೆಲಸ ಮಾಡಬೇಕೆಂಬ ತಾಕೀತು.
ಕನ್ನಡಪ್ರಭ ವಾರ್ತೆ ಕೋಲಾರ ಏ.28
ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಯಾರಾದರೂ ಕುಡಿಯುವ ನೀರಿನ ಕಾಮಗಾರಿಗೆ ಅಡ್ಡಿಪಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿ ಎಂದು ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶಕುಮಾರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, 'ಕುಡಿಯುವ ನೀರಿನ ವಿಚಾರದಲ್ಲಿ ರಾಜಿಯೇ ಇಲ್ಲ. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಚಾರಿಟಬಲ್ ಸೇವೆ ನೀಡುತ್ತಿಲ್ಲ. ಸರ್ಕಾರ ನಿಮಗೆ ಸಂಬಳ ನೀಡುತ್ತಿದೆ. ನಿಮ್ಮಂತೆಯೇ ನಾನು ಸರ್ಕಾರದಿಂದ ಸಂಬಳ ಪಡೆಯುತ್ತಿದ್ದು, ನಾವು ಮತ್ತು ನೀವು ಜನಪರವಾಗಿ ಕೆಲಸ ಮಾಡಬೇಕೇ ಹೊರತು ಯಾರೋ ಒಂದಿಬ್ಬರು ಪಟ್ಟಭದ್ರ ಹಿತಾಸಕ್ತಿಗಳು ಹೇಳಿದ ರೀತಿಯಲ್ಲಿ ಕೆಲಸ ಮಾಡುವುದಲ್ಲ' ಎಂದು ಹೇಳಿದರು. ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಪಂ ಪಿಡಿಒಗಳೊಂದಿಗೆ ಪ್ರತ್ಯೇಕವಾಗಿ ನೀರಿನ ವಿಚಾರವಾಗಿ ಮಾಹಿತಿ ಪಡೆದ ಶಾಸಕರು, ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತನ್ನಿ. ಸಮಸ್ಯೆ ದೊಡ್ಡದಾದ ಮೇಲೆ ಬರಬೇಡಿ. ಗ್ರಾಪಂನಿಂದ ಸಹಕಾರ ದೊರೆಯದಿದ್ದರೆ ತಾಪಂ ಇಒಗಳ ಗಮನಕ್ಕೆ ತಂದು ಕುಡಿಯುವ ನೀರಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತನ್ನಿ ಎಂದು ಸಲಹೆ ನೀಡಿದರು.
ನೀರು ದುರುಪಯೋಗಕ್ಕೆ ಗರಂ
ಶ್ರೀನಿವಾಸಪುರ ತಾಲೂಕಿನ ಬೈರಗಾನಹಳ್ಳಿ ಗ್ರಾಮದಲ್ಲಿ ಪ್ರಭಾವಿಯೊಬ್ಬರು ಸರ್ಕಾರದ ಕೊಳವೆ ಬಾವಿಯ ನೀರನ್ನು ಜಮೀನಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಸಭೆಗೆ ಬಂದಿದ್ದ ಗ್ರಾಮಸ್ಥರು ಆರೋಪಿಸಿದಾಗ ಸಿಡಿಮಿಡಿಗೊಂಡ ಶಾಸಕರು, ಪಿಡಿಒ ಶ್ರೀನಿವಾಸರನ್ನು ತರಾಟೆಗೆ ತೆಗೆದುಕೊಂಡರು. ಜನತೆ ನೀರಿಲ್ಲದೆ ಪದರಾಡುತ್ತಿದ್ದಾರೆ, ಸರ್ಕಾರದಿಂದ ಕೊರೆಸಿರುವ ಕೊಳವೆ ಬಾವಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದರೂ ಮೌನವಾಗಿರುವುದು ಸರಿಯಲ್ಲ. ಸಮಾಜದಲ್ಲಿ ಕಾನೂನು ಎಲ್ಲರಿಗೂ ಒಂದೇ. ಆಗಿರುವ ದುರುಪಯೋಗ ತಡೆಯರಿ. ಇಲ್ಲದಿದ್ದರೆ ನಿಮ್ಮ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಿಪಂ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ, ಸಿಇಒ ವಿನೋತ್ ಪ್ರಿಯಾ, ಪಂಚಾಯತ್ ರಾಜ್ ಇಲಾಖೆಯ ಅಧೀಕ್ಷಿಕ ರಾಧಾ ಕೃಷ್ಣ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ದಳಸನೂರು ಗೋಪಾಲಕೃಷ್ಣ, ಜನ್ನಘಟ್ಟ ವೆಂಕಟಮುನಿಯಪ್ಪ, ಕಾರ್ಯಪಾಲಕ ಅಭಿಯಂತರ ದೇವರಾಜ್, ಶ್ರೀನಿವಾಸಪುರ ತಹಸೀಲ್ದಾರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

