ಜನರನ್ನು ಸತಾಯಿಸಬೇಡಿ: ಮಂಜೇಗೌಡ
ಚಿಂತಾಮಣಿ: ಸಾರ್ವಜನಿಕರ ಮಾತಿಗೆ ಕಿಮ್ಮತ್ತು ನೀಡದ ಅಧಿಕಾರಿಗಳು ಯಾವುದೇ ಟೊಳ್ಳು ನೆಪವೊಡ್ಡಿ ಕಚೇರಿಗಳ ಸುತ್ತ ತಿರುಗಾಡಿಸುವುದು ಸರಿಯಲ್ಲ ಎಂದು ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿ ಮಂಜೇಗೌಡ ಕಂದಾಯ ಅಧಿಕಾರಿಗಳು ಹಾಗೂ ತಾಪಂ ಇಒ ವಸಂತಕುಮಾರ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದರು.
ಸೋಮವಾರ ನಗರದ ಪ್ರವಾಸ ಮಂದಿರದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ಮಾಡಿಕೊಡಬೇಕು ಎಂದು ತಿಳಿಸಿದರು. ತಾಲೂಕಿನ ಎಸ್.ರಾಗುಟ್ಟಹಳ್ಳಿಯಲ್ಲಿ ಉದ್ಯೋಗ ಖಾತ್ರಿಗೆ ಉಪಕರಣ ಸರಬುರಾಜು ಮಾಡಿದ ಗುತ್ತಿಗೆದಾರನಿಗೆ ಬಿಲ್ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ಬಗ್ಗೆ ಕಿಡಿಕಾರಿದ ಲೋಕಾಯುಕ್ತ ಅಧಿಕಾರಿ, ಇವರ ಮೇಲೆ ಕ್ರಿಮಿನಲ್ ಕೇಸ್ ಹೂಡ. ಕೃಷ್ಣನ ಜನ್ಮಸ್ಥಳಕ್ಕೆ ಹೋಗಲಿ ಎಂದು ಸಾರ್ವಜನಿಕರ ಎದುರು ತರಾಟೆಗೆ ತೆಗೆದುಕೊಂಡರು.
ನ್ಯಾಯ ಕೊಡಿಸಲು ಮನವಿ: ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಕೆ.ವಿ.ಮಂಜುನಾಥ್ ಅವರ ಪತ್ನಿ ನ್ಯಾಯ ಕೊಡಿಸಬೇಕು ಎಂದು ಕೋರಿ ಲೋಕಾಯುಕ್ತ ಅಧಿಕಾರಿಗೆ ದೂರು ನೀಡಿದರು. ಆತ್ಮಹತ್ಯೆ ಮಾಡಿಕೊಂಡ ಮಂಜುನಾಥ್ ಬರೆದಿದ್ದ ಡೆತ್‌ನೋಟ್ ಹಾಗೂ ಮನವಿ ಪತ್ರವನ್ನು ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

