ಪರಿಶೀಲಿಸಿ ಖಾತೆ ಮಾಡಿ: ಮಂಜೇಗೌಡ
ಶಿಡ್ಲಘಟ್ಟ: ಕಂದಾಯ ಇಲಾಖೆಯ ಸಾಗುವಳಿ ಚೀಟಿಗಳ ವಿತರಣೆಯಲ್ಲಿ ಅಕ್ರಮಗಳಾಗಿರುವ ಬಗ್ಗೆ ಅನುಮಾನಗಳಿವೆ. ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಿ ಖಾತೆಗಳನ್ನು ಮಾಡಬೇಕು ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜೇಗೌಡ ಸಲಹೆ ನೀಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಕುಂದು ಕೊರತೆಗಳ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, “ÑÛVÚßÈÚØ ಚೀಟಿಗಳನ್ನು ನಕಲು ಮಾಡಿಕೊಂಡು, ಖಾತೆ ಮಾಡಿಕೊಡುವಂತೆ ತಹಸೀಲ್ದಾರ್ಗೆ ಅರ್ಜಿ ಸಲ್ಲಿಸುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಕಂದಾಯ ಇಲಾಖೆಯಲ್ಲಿ ಖಾತೆ ಮಾಡುವಾಗ ಸರಿಯಾಗಿ ದಾಖಲೆ ಪರಿಶೀಲನೆ ಮಾಡಿದ ನಂತರವೇ ಖಾತೆ ಮಾಡಿಕೊಡಿ. 25 ವರ್ಷಗಳ ಹಿಂದೆ ಸಾಗುವಳಿ ಪಡೆದುಕೊಂಡು ಈಗ ಖಾತೆ ಮಾಡುವಂತೆ ಅರ್ಜಿಗಳನ್ನು ಸಲ್ಲಿಸುತ್ತಿರುವ ಪ್ರಕಣಗಳು «Úsæ¾Úßß~¡Èæ’ ಎಂದರು.
ತಲದುಮ್ಮನಹಳ್ಳಿ ಗ್ರಾಮದಲ್ಲಿ ಗ್ರಾಮಠಾಣಾ ಜಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ತೊಟ್ಟಿ ನಿರ್ಮಾಣ ಮಾಡಲು ಹೊರಟಿದ್ದಾರೆ ಎಂದು ಗ್ರಾಮಸ್ಥರು ನೀಡಿದ ದೂರನ್ನು ಸ್ವೀಕರಿಸಿದ ಅವರು, ಸಂಬಂಧಪಟ್ಟ ವ್ಯಕ್ತಿಗೆ ನೋಟಿಸ್ ಜಾರಿ ಮಾಡಿ, ಗ್ರಾಮಠಾಣೆಯ ಜಾಗವೇ ಎಂಬುದನ್ನು ಪರಿಶೀಲಿಸಿ. ಆ ವ್ಯಕ್ತಿ ದಾಖಲೆ ಒದಗಿಸಲು ವಿಫಲನಾದರೆ ಕೂಡಲೇ ಅವರ ಮೇಲೆ ಎಫ್ಐಆರ್ ದಾಖಲಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಅಧಿಕಾರಿಗಳಾದ ಎನ್.ರಮೇಶ್, ರಾಘವೇಂದ್ರ, ಗುರುಬಸಪ್ಪ ಸೇರಿ ಅನೇಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

