ಕ್ರಿಯಾ ಯೋಜನೆಗೆ ಶಾಸಕ ಸೂಚನೆ
ಶಿಡ್ಲಘಟ್ಟ: ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ಅಗತ್ಯವಾಗಿರುವ ಕ್ರಿಯಾ ಯೋಜನೆಯನ್ನು ತಯಾರಿಸಿ ಜಿಲ್ಲಾಧಿಕಾರಿಗಳಿಗೆ ಕಳುಹಿಸುವಂತೆ ಶಾಸಕ ಎಂ.ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಟಾಸ್ಕ್ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, 'ಕಳೆದ ಸಾಲಿನಲ್ಲಿ ಬಿಡುಗಡೆಯಾಗಬೇಕಾಗಿದ್ದ ಅನುದಾನವನ್ನೂ ಈ ಸಾಲಿನ ಬೇಡಿಕೆ ಪಟ್ಟಿಯಲ್ಲಿ ಸೇರಿಸಿ ಬಿಡುಗಡೆಗಾಗಿ ಕಳುಹಿಸಿಕೊಡಬೇಕು. ವಿಧಾನಸಭೆಯ ಅಧಿವೇಶನದಲ್ಲಿ ಬರಪೀಡಿತ ತಾಲೂಕುಗಳಲ್ಲಿನ ನೀರಿನ ಸಮಸ್ಯೆಯನ್ನು ಬಗೆಹರಿಸಲು ಒಂದೊಂದು ತಾಲೂಕಿಗೆ 10 ಕೋಟಿಯನ್ನು ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ನೀಡುತ್ತಿರುವ ಅನುದಾನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದರು. ಜಿಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಗಣಪತಿ ಮಾತನಾಡಿ, 'ನಮ್ಮ ನಿರೀಕ್ಷೆಯಂತೆ ಅನುದಾನ ಬಿಡುಗಡೆಯಾಗುತ್ತಿಲ್ಲ. ಬೋರ್ವೆಲ್ ವಿಫಲವಾದರೆ ಮತ್ತೊಂದು ಬೋರ್ವೆಲ್ ಕೊರೆಯಿಸುವಂತೆ ಜನರು ಪಟ್ಟು ಹಿಡಿಯ್ತತಾರೆ. ಆದರೆ, ನಮಗೆ ಅನುದಾನವಿರುವುದಿಲ್ಲ. ಹಾಗಾಗಿ ತೀವ್ರ ಸಮಸ್ಯೆಯಾಗುತ್ತಿದೆ' ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡರು. ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ತಾಪಂ ಅಧ್ಯಕ್ಷ ಯರಬಚ್ಚಪ್ಪ, ಇಒ ಉಮೇಶ್, ಜಿಪಂ ಎಇಇ ಗಣಪತಿ, ಪುರಸಭಾ ಮುಖ್ಯಾಧಿಕಾರಿ ರಾಮ್ಪ್ರಕಾಶ್, ಜೆಇಗಳಾದ ರವಿಕುಮಾರ್, ಕೇಶವಮೂರ್ತಿ, ನಾರಾಯಣಸ್ವಾಮಿ, ಚಿಲಕಲನೇರ್ಪು ಹೋಬಳಿಯ ಜೆಇ ನಾರಾಯಣಸ್ವಾಮಿ, ಪ್ರಸಾದ್ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

