ನೀರಿನ ಸಮಸ್ಯೆ ತಕ್ಷಣ ಕ್ರಮ ಕೈಗೊಳ್ಳಿ: ಶಾಸಕ
ಮುಳಬಾಗಲು: ತಾಲೂಕಿನಲ್ಲಿ ನೀರಿನ ಸಮಸ್ಯೆ ಇರುವ ಕಡೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೇ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಜಿ. ಮಂಜುನಾಥ್ ಎಚ್ಚರಿಕೆ ನೀಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಟಾಸ್ಕ್ಪೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ನೀರು, ರಸ್ತೆ ಮತ್ತು ವಿದ್ಯುತ್ ಕೇಳುತ್ತಾರೆ. ಅದನ್ನು ನೀಡದಿದ್ದರೆ ಹೇಗೆ? ಈ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು. ಸರ್ಕಾರ ನೀಡುತ್ತಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. 102 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆವಿದೆ. ಸಮಸ್ಯೆ ತೀವ್ರ ಇರುವ 21 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. 4 ಕಡೆ ಪೈಪ್ಲೈನ್ ಮೂಲಕ ಪೂರೈಸಲಾಗುತ್ತಿದೆ. ಹಲವು ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಯಿಸಿದರೂ ನೀರು ಸಿಗುತ್ತಿಲ್ಲ. ರೈತರ ಜಮೀನುಗಳಿಂದ ನೀರು ಪಡೆದು ಪೂರೈಸಲಾಗುವುದು ಎಂದು ಶಾಸಕರು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಇಒ ಟಿ.ವಿ.ಅರುಣ್ಕುಮಾರ್, ಹೊಸದಾಗಿ ಕೊಳವೆಬಾವಿ ಕೊರೆಯಿಸಲು ಕೋಲಾರ ಜಿಲ್ಲಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಗತ್ಯವಿದ್ದಡೆ ಮಾತ್ರ ಕೊರೆಯಿಸಬೇಕು. ಅಲ್ಲದೆ, ಖಾಸಗಿಯಾಗಿ ನೀರು ಖರೀದಿಸಲಾಗುವುದು. ಸಾರ್ವಜನಿಕರು ನೀರನ್ನು ವ್ಯರ್ಥ ಮಾಡಬಾರದು ಎಂದು ಅವರು ಹೇಳಿದರು. ಪಶುಪಾಲನೆ ಸಹಾಯಕ ನೀರ್ದೇಶಕ ಡಾ.ರಮಾನಂದ ಮಾತನಾಡಿ, 67,356 ಜಾನುವಾರುಗಳಿದ್ದು, 18.09 ಟನ್ ಮೇವು ಲಭ್ಯವಿದೆ. ಇದು ಒಂದುವರೆ ತಿಂಗಳಿಗೆ ಮಾತ್ರ ಸಾಕಾಗುತ್ತದೆ. ಹಾಗಾಗಿ, ಮುಂಬರುವ ದಿನಗಳಲ್ಲಿ ಜಾನುವಾರುಗಳಿಗೆ ತೀವ್ರ ತೊಂದರೆಯಾಗಲಿದೆ ಎಂದು ವಿವರಿಸಿದರು.
ಹಲವೆಡೆ ಗೋಶಾಲೆ ಆರಂಭಕ್ಕೆ ನಿರ್ಧಾರ
ಆವಣೆ ಹೋಬಳಿ ಕೇಂದ್ರ, ಬೈರಕೂರು ಹೋಬಳಿಯ ಘಟ್ಟು ವೆಂಕಟರವಣ ದೇವಾಲಯದ ಬಳಿ, ಮಲ್ಲನಾಯಕನಹಳ್ಳಿ ಸಮೀಪವಿರುವ ನಾಗಮಂಗಲದಲ್ಲಿ ಉತ್ತನೂರು ಗ್ರಾಮದಲ್ಲಿ, ಮಂಡಿಕಲ್ ಪ್ರಸನ್ನ ಚೌಡೇಶ್ವರಿ ದೇವಾಲಯದ ಅವರಣದಲ್ಲಿ ಹಾಗೂ ತಾಯಲೂರು ಹೋಬಳಿ ಕೇಂದ್ರದಲ್ಲಿ ಗೋಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಯಿತು. ಜತೆಗೆ ಅವಶ್ಯಕವಿದ್ದಲ್ಲಿ ಕೊಳವೆ ಬಾವಿ ಮತ್ತು ತೊಟ್ಟಿಗಳನ್ನು ನಿರ್ಮಿಸಲು ತೀರ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

