ಕೋಲಾರ

ಚಾಕು ತೋರಿಸಿ ದರೋಡೆ

Published On :

ಕೋಲಾರ: ತಾಲೂಕಿನ ಪೆಮ್ಮಶೆಟ್ಟಿಹಳ್ಳಿಯ ಸಮೀಪದ ಶ್ರೀ ಆಂಜನೇಯಸ್ವಾಮಿ ದೇವಾಲಯದ ಬಳಿ ಕೋಲಾರ ನಗರದ ಪೇಟೆಚಾಮನಹಳ್ಳಿಯ ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಕಂಪನಿ ಕ್ಯಾಷಿಯರ್ ಸೋಮರಾಜು ಎಂಬುವರನ್ನು ಚಾಕು ತೋರಿಸಿ ರು. 30 ಸಾವಿರ ನಗದು,ದಾಖಲೆಗಳು ಹಾಗೂ ರು. 25 ಸಾವಿರ ಬೆಲೆಯ ಹ್ಯಾಂಡಲ್ ಡಿವೈಸ್ ಅನ್ನು ದೋಚಿರುವ ಘಟನೆ ನಡೆದಿದೆ.
ಮೈಕ್ರೋ ಫೈನಾನ್ಸ್ ಕಂಪನಿಯಿಂದ ನೀಡಿರುವ ಸಾಲವನ್ನು ವಸೂಲಿ ಮಾಡಲು ಸೋಮರಾಜು ಬೈಕಿನಲ್ಲಿ ನಾಗಲಾಪುರ ಗ್ರಾಮಕ್ಕೆ ಹೋಗಿ ಅಲ್ಲಿಂದ ಪೆಮ್ಮಶೆಟ್ಟಿಹಳ್ಳಿಯ ಗ್ರಾಮಕ್ಕೆ ಹೋಗಲು ಆಂಜನೇಯಸ್ವಾಮಿ ದೇವಾಲಯದ ಬಳಿ ಇರುವ ನೀಲಗಿರಿ ತೋಪಿನ ಬಳಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಇಂಡಿಕಾ ಕಾರು ಸೋಮರಾಜು ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಸೋಮರಾಜು ಕೆಳಗೆ ಬಿದ್ದಾಗ ಕಾರಿನಲ್ಲಿದ್ದ ಐವರು ಕೃತ್ಯ ಎಸಗಿ ಪರಾರಿ ಆಗಿದ್ದಾರೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.