ನಿವೃತ್ತಿ ವೇತನಕ್ಕೆ ಮನವಿ
ಕೋಲಾರ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ನೌಕರರಿಗೆ ನಿವೃತ್ತಿ ನಂತರ ಪಿಂಚಣಿ ಸೌಲಭ್ಯ ಕಲ್ಪಿಸಲು ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಕೋಲಾರ ಜಿಪಂ ನೌಕರರು ಶಾಸಕ ರಮೇಶ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಗರದಲ್ಲಿ ಮಂಗಳವಾರ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಕರೆದಿದ್ದ ಸಭೆಗೆ ಬಂದಿದ್ದ ಶಾಸಕ ರಮೇಶ್‌ಕುಮಾರ್ ಅವರನ್ನು ಭೇಟಿ ಮಾಡಿದ ನೌಕರರು, 2013ರ ಮಾರ್ಚ್ 12 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಪಂ ಕಾರ್ಯದರ್ಶಿಗಳು, ಪಿಡಿಒಗಳಿಗೆ ಮಾತ್ರ ವೃಂದ ಮತ್ತು ನೇಮಕಾತಿ ನಿಯಮ ರಚಿಸಿ ಸರ್ಕಾರಿ ನೌಕರರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.
ಆದರೆ, ಜಿಪಂ ಮತ್ತು ತಾಪಂ ವೃಂದಗಳ ಲಿಪಿಕ ಸಿಬ್ಬಂದಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ರಚನೆಯಾಗಿಲ್ಲದಿರುವುದರಿಂದ ನಿವೃತ್ತಿ ನಂತರ ಪಿಂಚಣಿ ಸೌಲಭ್ಯ ಸಿಗುವುದು ಅನುಮಾನವಾಗಿರುವುದರಿಂದ ಸರ್ಕಾರದ ಮೇಲೆ ಒತ್ತಡ ತಂದು ಜಿಪಂ ನೌಕರರಿಗೆ ನಿವೃತ್ತಿ ನಂತರ ಪಿಂಚಣಿ ಸಿಗುವಂತೆ ಮಾಡಬೇಕೆಂದು ಕೋರಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ರಮೇಶ್‌ಕುಮಾರ್, ಲೋಕಸಭಾ ಚುನಾವಣೆಗಳು ಮುಗಿವವರೆಗೆ ವಿಧಾನಸಭಾ ಅಧಿವೇಶನ ನಡೆಯುವುದಿಲ್ಲ. ಅಧಿವೇಶನ ನಡೆಯುವ ಸಂದರ್ಭದಲ್ಲಿ ತಾವುಗಳು ಮನವಿ ನೀಡಿದಲ್ಲಿ ಸದನದಲ್ಲಿ ಚರ್ಚಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಪಂ ಅಧೀಕ್ಷಕಿ ಎನ್. ಸುನಂದಾ, ಪರಮೇಶ್ವರಯ್ಯ, ಸಿಬ್ಬಂದಿ ಬಿ. ಆನಂದ್, ಟಿ.ನಾರಾಯಣಸ್ವಾಮಿ, ಮಂಜುನಾಥ್, ಶ್ರೀನಿವಾಸ್, ಶಕುಂತಲಾ, ಪುಷ್ಪಬಾಯಿ, ಪ್ರಭಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

