ಕೋಲಾರ

ರಾಮ್‌ದೇವ್ ಹೇಳಿಕೆ ಖಂಡಿಸಿ ಶಿಡ್ಲಘಟ್ಟ ಪಟ್ಟಣದಲ್ಲಿ ಪ್ರತಿಭಟನೆ

Published On :

ಶಿಡ್ಲಘಟ್ಟ: ಬಾಬಾ ರಾಮ್‌ದೇವ್ ಅವರ ದಲಿತ ಮಹಿಳೆ ಮೇಲಿನ ಅವಹೇಳನಕಾರಿ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಅಸಮಾನತೆಯನ್ನು ಹೋಗಲಾಡಿಸಿ ಸಮಾನತೆಯನ್ನು ತರಲು ಬಹಳಷ್ಟು ನಾಯಕರು ಶ್ರಮಿಸುತ್ತಿದ್ದು ದೇಶದಲ್ಲಿನ ದಲಿತ ಮಹಿಳೆಯ ಬಗ್ಗೆ ಕೀಳಾಗಿ ಮಾತನಾಡಿದ ಬಾಬಾ ರಾಮದೇವರನ್ನು ಗಡಿಪಾರು ಮಾಡಬೇಕು, ದೇಶದ ಯಾವುದೇ ಪ್ರದೇಶದಲ್ಲಿ ಸಾರ್ವಜನಿಕ ಸಭೆ ಸಮಾರಂಬಗಳಲ್ಲಿ ಭಾಗವಹಿಸದಂತೆ ನಿರ್ಬಂದ ಹೇರಬೇಕು, ಆತನ ಆಸ್ತಿಗಳನ್ನೆಲ್ಲಾ ಮುಟ್ಟುಗೊಲು ಹಾಕಿಕೊಳ್ಳಬೇಕು, ರಾಮ್‌ದೇವ್ ವಿರುದ್ಧ ಜಾತಿನಿಂದನೆ ಪ್ರಕರಣವನ್ನು ದಾಖಲೆ ಮಾಡಬೇಕು ಎಂದು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿಯ ಮುಂದೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಗೆ ಮನವಿಪತ್ರ ರವಾನಿಸುವಂತೆ ಕೋರಿ ತಾಲೂಕು ಡಂಡಾದಿಕಾರಿಗಳಿಗೆ ಸಲ್ಲಿಸಿದರು.
ದಲಿತ ಮುಖಂಡರಾದ ವೆಂಕಟೇಶ್, ಗುರುಮೂರ್ತಿ, ರವಿ, ತಿರುಮಳಪ್ಪ, ಮುನಿರಾಜು, ಕೃಷ್ಣಪ್ಪ, ಮೂರ್ತಿ, ಕೃಷ್ಣಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಡೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.