ಎಂಇಎಸ್ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ
ಮಾಲೂರು: ಬೆಳಗಾವಿಯಲ್ಲಿ ಎಂ.ಇ.ಎಸ್. ಪುಂಡರು ಕನ್ನಡದ ಧ್ವಜವನ್ನು ಸುಟ್ಟು, ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರವನ್ನು ಶವಯಾತ್ರೆ ಮಾಡಿ ದಹನ ಮಾಡಿರುವುದನ್ನು ಖಂಡಿಸಿ ಸ್ಥಳೀಯ ಕರವೇ ಕಾರ್ಯಕರ್ತರು ಶುಕ್ರವಾರ ಮಧ್ಯಾಹ್ನ ಪಟ್ಟಣದ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ದಿಡೀರ್ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಘಟನೆ ನಡೆಯಿತು.
ಎಂ.ಇ.ಎಸ್. ಪುಂಡರನ್ನು ರಾಜ್ಯ ಸರ್ಕಾರ ಈ ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು. ಕನ್ನಡ ವಿರೋಧಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿ ತಾನೇ ನೇತೃತ್ವ ವಹಿಸುತ್ತಿರುವ ಸಂಭಾಜಿ ಪಾಟೀಲ್ ಅವರನ್ನು ಬಂಧಿಸದ ರಾಜ್ಯ ಸರ್ಕಾರ ನಮ್ಮ ನೆಲದಲ್ಲಿ ನಮ್ಮ ಹಕ್ಕು ಮಂಡಿಸಲು ಹೋಗುತ್ತಿದ್ದ ಕನ್ನಡ ಹೋರಾಟಗಾರರನ್ನು ಬಂಧಿಸಿ ತಮ್ಮ ಪೌರುಷ ತೋರಿಸುತ್ತಿರುವುದು ನಾಚಿಗೆಗೇಡಿನ ಸಂಗತಿ. ಕನ್ನಡಗರ ಸಹನೆಯನ್ನು ಪರೀಕ್ಷೆ ಮಾಡುತ್ತಿರುವ ಎಂ.ಇ.ಎಸ್.ಕಾರ್ಯಕರ್ತರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕನ್ನಡಿಗರು ಬೆಳಗಾವಿ-ಯಳ್ಳೂರಿಗೆ ನುಗ್ಗಿ ಕನ್ನಡ ನೆಲ-ಜಲವನ್ನು ಕಾಪಾಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆ
ಬಾಗೇಪಲ್ಲಿ: ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿರ ಮೇಲೆ ನಡೆಯುತ್ತಿರುವ ಸರಣಿ ಅತ್ಯಾಚಾರಗಳಿಗೆ ಹಾಗೂ ಕನ್ನಡ ನೆಲದಲ್ಲಿ ಎಂ.ಇ.ಎಸ್ ಮತ್ತು ಶಿವಸೇನೆ ಕಾರ್ಯಕರ್ತರು ನಡೆಸುತ್ತಿರುವ ದಬ್ಬಾಳಿಕೆಗೆ ಕಡಿವಾಣ ಹಾಕಬೇಕೆಂದು ಜೈ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ನೂತನ ಅಧ್ಯಕ್ಷ ಬಿ. ಮಂಜುನಾಥ್ ಒತ್ತಾಯಿಸಿದ್ದಾರೆ. ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಯಕರ್ನಾಟಕ ಸಂಘಟನೆ ಭ್ರಷ್ಟಾಚಾರ ವಿರೋಧಿ ಮತ್ತು ಜನಪರ ಹೋರಾಟಗಳನ್ನು ಹಮ್ಮಿಕೊಂಡು ಸರ್ಕಾರದ ಗಮನವನ್ನು ಸೆಳೆಯುವುದರ ಜೊತೆಗೆ ನಾಡಿನ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟಾದಾಗ ವೀರ ಸೈನಿಕರಂತೆ ಹೋರಾಟ ನಡೆಸಲಿದೆ ಎಂದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

