ಕೋಲಾರ

ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಹೊಂದಲು ಸಲಹೆ

Published On :

ಚಿಕ್ಕಬಳ್ಳಾಪುರ: ಗುಣಮಟ್ಟದ ಶಿಕ್ಷಣದಿಂದ ಪ್ರತಿಭಾವಂತರಾಗಿ ರೂಪುಗೊಂಡು ತಂದೆ ತಾಯಿ, ಗುರುಗಳಿಗೆ ಒಳ್ಳೆಯ ಹೆಸರು ತರುವ ಕೆಲಸ ಮಾಡಬೇಕೆಂದು ಅದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 11ನೇ ವರ್ಷದ ಕೆ.ಬಿ. ಪಿಳ್ಳಪ್ಪನವರ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.
ಶಿಕ್ಷಣದಿಂದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಬೇಕು. ಆಗ ಮಕ್ಕಳು ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಮುಂದೊಂದು ದಿನ ಎರಡು ಜಿಲ್ಲೆಗಳು ಮರಳುಗಾಡು ಆಗಲಿವೆ. ಈ ನಿಟ್ಟಿನಲ್ಲಿ ಸರ್ಕಾರ ತ್ವರಿತವಾಗಿ ಶಾಶ್ವತ ನೀರಾವರಿ ಸೌಲಭ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದರು.
ಸಮಾಜ ಸೇವೆ: ದತ್ತಿ ಕಾರ್ಯದರ್ಶಿ, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಮಾತನಾಡಿ, ದಿವಂಗತ ಕೆ.ಬಿ. ಪಿಳ್ಳಪ್ಪನವರ ಹೆಸರಿನಲ್ಲಿ 2004ರಲ್ಲಿ ದತ್ತಿಯನ್ನು ಸ್ಥಾಪಿಸಿ ಪ್ರತಿ ವರ್ಷ ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವಾರು ಸಮಾಜ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲಿ ದತ್ತಿ ವತಿಯಿಂದ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಕೃಷಿ ತಜ್ಞರನ್ನು ಕರೆಸಿ ವ್ಯವಸಾಯದ ಬಗ್ಗೆ ತಿಳಿಸಿಕೊಡಲಾಗುವುದು. ಈ ಬಾರಿ ವ್ಯವಸಾಯ ಮತ್ತು ವಿದ್ಯೆಯಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಸಿದ್ದೇಶ್ವರನಾಥ ಸ್ವಾಮೀಜಿ, ಶ್ರೀ ಮಂಗಳನಾಥ ಸ್ವಾಮೀಜಿ, ದತ್ತಿಯ ಅಧ್ಯಕ್ಷ ಡಾ.ಕೆ.ಪಿ. ಶ್ರೀನಿವಾಸ ಮೂರ್ತಿ, ಡಾ.ಎನ್. ಎಸ್. ರಾಮೇಗೌಡ, ಕೆ.ಪಿ. ಚನ್ನಬೈರೇಗೌಡ, ಕೆ.ಪಿ. ಚಂದ್ರಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.