ಸಂಸ್ಕರಿಸಿದ ನೀರು ಕೆರೆಗಳಿಗೆ ಹರಿಸಲು ಒತ್ತಾಯ
ಕೋಲಾರ: ಬೆಂಗಳೂರಿನ ಜನರು ಬಳಸಿ ಪೂರ್ವದ ಕಡೆ ಹರಿಯುವ ನೀರನ್ನು ಸಂಸ್ಕರಣೆ ಮಾಡಿ ಕೋಲಾರ ಜಿಲ್ಲೆಯ ಮಾಲೂರು, ಕೋಲಾರ, ಬಂಗಾರಪೇಟೆ ತಾಲೂಕುಗಳ ಕೆರೆಗಳಿಗೆ ತುಂಬಿಸಬೇಕೆಂದು ಮುಖ್ಯಮಂತ್ರಿಗಳನ್ನು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಒತ್ತಾಯಿಸಿದರು.
ನಗರದ ದೇವರಾಜ ಅರಸು ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಅಬ್ಬಣಿಶಿವಪ್ಪ ಸತತವಾಗಿ ಕೋಲಾರ ಜಿಲ್ಲೆ ಬರಗಾಲಕ್ಕೆ ತುತ್ತಾಗಿದ್ದು, ನೀರಾವರಿಗೆ ಯಾವುದೇ ನದಿಮೂಲಗಳು ಇಲ್ಲದೇ ಇರುವುದರಿಂದ ರೈತರು ಕೇವಲ ಅಂತರ್ಜಲವನ್ನು ನಂಬಿ ಕೃಷಿ ಮಾಡುತ್ತಿದ್ದಾರೆ. ಆದರೆ ಈಗ ಅಂತರ್ಜಲ ಬತ್ತಿ ಕೆಲವೇ ದಿನಗಳಲ್ಲಿ ಜಿಲ್ಲೆ ಮರುಭೂಮಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷ ಕೊತ್ತಮಿರಿ ಜಿ. ಮಂಜುನಾಥ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ಮಾಲೂರು ತಾಲೂಕು ಅಧ್ಯಕ್ಷ ಬೆಡ್ಡಶೆಟ್ಟಹಳ್ಳಿ ರಮೇಶ್, ಬಂಗಾರಪೇಟೆಯ ಟಿ.ಎನ್. ರಾಮೇಗೌಡ ಇದ್ದರು.
ವಲಯ -2ರ ಕ್ರೀಡಾಕೂಟ ಇಂದಿನಿಂದ
ಕೋಲಾರ: ತಾಲೂಕಿನ ಕುರುಗಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ವಲಯ-2ರ ಕ್ರೀಡಾಕೂಟವನ್ನು ಆ.4 ಮತ್ತು 5ರಂದು ದ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ವಲಯ-2ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲೆಯ ಕ್ರೀಡಾಪಟುಗಳು ಭಾಗವಹಿಸುವಂತೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

