ಗೋಡೆ ನಿರ್ಮಾಣ ವಿವಾದ ಕೊಲೆಯಲ್ಲಿ ಅಂತ್ಯ
ಕೆಜಿಎಫ್: ಮನೆ ಮುಂದೆ ಗೋಡೆ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿ ಇಬ್ಬರ ಮಧ್ಯೆ ಜಗಳವುಂಟಾಗಿ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಿದ ಘಟನೆ ಉರಿಗಾಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಚ್ಚಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ(65) ಕೊಲೆಯಾಗಿ ಮೃತಪಟ್ಟ ದುರ್ದೈವಿ. ಇವರಿಗೂ ಹಾಗೂ ಅದೇ ಗ್ರಾಮದ ನಿವಾಸಿ ಸುರೇಶ್ ಹಾಗೂ ಹರೀಶ್ ಬಾಬು ಎಂಬುವರ ಮಧ್ಯೆ ಮನೆ ಮುಂದೆ ಗೋಡೆ ನಿರ್ಮಾಣ ಮಾಡುವ ವಿಚಾರದಲ್ಲಿ ಜಗಳವುಂಟಾಗಿ ಹಲಿಗೆಯಿಂದ ಕೃಷ್ಣಪ್ಪ ಅವರ ಮೇಲೆ ಹಲ್ಲೆ ನಡೆಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಉರಿಗಾಂ ಠಾಣಾ ಪೊಲೀಸರು, ಆರೋಪಿಗಳಾದ ಸುರೇಶ್ ಮತ್ತು ಹರೀಶ್ ಬಾಬು ಅವರನ್ನು ಬಂಧಿಸಿ,ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅತ್ಯಾಚಾರ ಯತ್ನ ಖಂಡಿಸಿ ಎಸ್ಎಫ್ಐ ಖಂಡನೆ
ಗುಡಿಬಂಡೆ: ತಾಲೂಕಿನ ಪಾವಜೇನಹಳ್ಲಿ ಗ್ರಾಮದಲ್ಲಿ ಯುವಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ ಘಟನೆಯನ್ನು ತಾಲೂಕು ಎಸ್ಎಫ್ಐ. ಘಟಕ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಕಾಲೇಜು ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು. ಈ ವೇಳೆ ತಹಸೀಲ್ದಾರರಿಗೆ ಮನವಿ ಪತ್ರ ಅರ್ಪಿಸಿ ಮಾತನಾಡಿದ ವಿದ್ಯಾರ್ಥಿ ಮುಖಂಡ ಈಶ್ವರಪ್ಪ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕಾನೂನು ರೂಪಿಸುವ ಅಗತ್ಯವಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗೆ ಉಗ್ರವಾದ ಶಿಕ್ಷೆ ನೀಡಬೇಕು ಎಂದು ನುಡಿದರು. ಪ್ರತಿಭಟನೆಯಲ್ಲಿ ತಾಲೂಕು ಮುಖಂಡರಾದ ಅಂಬರೀಶ್, ವಿಶ್ವನಾಥ್, ಶ್ರೀನಾಥ್, ಲಾವಣ್ಯ, ಶೈಲಜಾ, ಗೀತಾ, ಗಾಯತ್ರಿ ಇತರರಿದ್ದರು.
ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಸಭೆ ಇಂದು
ಗುಡಿಬಂಡೆ: ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಆ. 15 ರಂದು ಆಚರಿಸಲುದ್ದೇಶಿಸಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವ ಸಲುವಾಗಿ ಸಭೆ ಆ.5ರಂದು ನಡೆಸಲಾಗುವುದು. ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯುವ ಈ ಸಭೆಗೆ ಪಟ್ಟಣದ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳು ಆಗಮಿಸಿ, ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ತಹಸೀಲ್ದಾರ್ ನಂಜಪ್ಪ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

