ಚಿಂತಾಮಣಿ: ಸೂಳಿಗೆರೆ ಗ್ರಾಮದಲ್ಲಿ ಬಾಲಕ ತಿಮ್ಮಣ್ಣ ಆಕಸ್ಮಿಕವಾಗಿ ಕಾಲುಜಾರಿ ಕೊಳವೆ ಬಾವಿಗೆ ಬಿದ್ದ ಬಾಲಕ ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರ ಬರಲಿ ಎಂದು ತಾಲೂಕು ರೈತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ನಗರದಲ್ಲಿ ವಿಶೇಷ ಪೂಜೆ ನಡೆಸಿದರು. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಸೋಮವಾರ ಬೆಳಿಗ್ಗೆ ಕರ್ನಾಟಕ ರಾಜ್ಯ ರೈತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಬಾಲಕ ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರಬರಲಿ ಎಂದು ವಿಶೇಷ ಪೂಜೆ ಮಾಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕೆ.ಎನ್. ಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಆರ್. ಅನಂದ, ಮಹೇಶ್, ಮಹೇಂದ್ರ, ಪ್ರಭಾಕರ, ಮಧು, ವೆಂಕಟೇಶ, ಕೃಷ್ಣಾರೆಡ್ಡಿ, ಗಣೇಶ, ಮೋಹನ್, ವಿಶ್ವನಾಥ ಉಪಸ್ಥಿತರಿದ್ದರು.