ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ
ಬಂಗಾರಪೇಟೆ: ಖಾಸಗಿ ಶಾಲೆಗಳಲ್ಲಿ ಮಕ್ಕಳು ಮೂಲಭೂತ ಅನುಕೂಲಗಳಿಲ್ಲದೆ ಅನುಭವಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡು ಆಡಳಿತ ಮಂಡಳಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸೋಮವಾರ ಪಟ್ಟಣದ ಎಲ್ಲಾ 13 ಖಾಸಗಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಇತ್ತೀಚಿಗೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಮಕ್ಕಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಎಲ್ಲಾ ಶಾಸಕರಿಗೆ ತಮ್ಮ ವ್ಯಾಪ್ತಿಯ ಖಾಸಗಿ ಶಾಲೆಗಳಿಗೆ ಬಿಇಒ, ಸಿಡಿಪಿಒ ಹಾಗೂ ಪೊಲೀಸರೊಂದಿಗೆ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಹಾಗೂ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಭದ್ರತೆ ಕಲ್ಪಿಸಬೇಕು ನಿಯಮ ಪಾಲಿಸದ ಶಾಲೆಗಳ ಮಾನ್ಯತೆಯನ್ನು ರದ್ದುಗೊಳಿಸುವಂತೆ ನೀಡಿದ್ದ ಸುತ್ತೋಲೆ ಎಂತೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮತ್ತು ಅಧಿಕಾರಿಗಳೊಂದಿಗೆ ಎಲ್ಲಾ ಖಾಸಗಿ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
ಕೆಲವು ಶಾಲೆಗಳಲ್ಲಿ ಕಿರಿದಾದ ಕೊಠಡಿಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಿನ ಮಕ್ಕಳನ್ನು ಕೂರಿಸಿಕೊಂಡು ಪಾಠ ಮಾಡುತ್ತಿದ್ದರೂ,ಸೂಕ್ತವಾದ ಗಾಳಿ ಬೆಳಕು ಇರಲಿಲ್ಲ, ಮಕ್ಕಳಿಗೆ ಆಟವಾಡಲು ಸೂಕ್ತವಾದ ಸ್ಥಳದ ಅಭಾವ ಕಂಡು ಬಂತು,ಅನೈರ್ಮಲ್ಯ ಸಹ ತಾಂಡವವಾಡುತ್ತಿದ್ದನ್ನು ಕಂಡ ಶಾಸಕರು ಅಸಮಾಧಾನಗೊಂಡರು.ಲೋಪದೋಷ ಇದ್ದ ಶಾಲೆಗಳ ಮುಖ್ಯಶಿಕ್ಷಕರಿಗೆ ಲೋಪ ಸರಿಸಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.ಕೆಲವು ಶಾಲೆಗಳಲ್ಲಿ ಮಕ್ಕಳನ್ನು ಕರೆ ತರುವ ವಾಹನಗಳು ಅವ್ಯವಸ್ಥೆಯಲ್ಲಿತ್ತು. ಇಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಪೊಲೀಸರಿಗೆ ತಿಳಿಸಿದರು. ಇದು ಪ್ರಥಮ ಭೇಟಿಯಾಗಿದ್ದು ಮುಂದಿನ ವಾರ ಎಲ್ಲಾ ಶಾಲೆಗಳ ಮುಖ್ಯಸ್ಥರ ಸಭೆ ಕರೆದು ಅವ್ಯವಸ್ಥೆ ತಿದ್ದಿಕೊಳ್ಳಲು ಅವಕಾಶ ನೀಡಲಾಗುವುದು ನಂತರವೂ ಸರಿಪಡಿಸಿಕೊಳ್ಳದ ಪಕ್ಷದಲ್ಲಿ ಶಾಲೆಗಳ ಮಾನ್ಯತೆಯನ್ನು ರದ್ದು ಮಾಡಲು ಶಿಫಾರಸ್ಸು ಮಾಡುವುದಾಗಿ ಶಾಸಕರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

