ಬಂಗಾರಪೇಟೆ: ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಎಸ್ಎಫ್ಸಿ ವಿಶೇಷ ಅನುದಾನದಲ್ಲಿ ಮಂಜೂರಾಗಿರುವ 2ಕೋಟಿ ವೆಚ್ಚದಲ್ಲಿ 25 ಕೊಳವೆ ಬಾವಿಗಳನ್ನು ಕೊರೆಸಿ ಸಮಸ್ಯೆ ನೀಗಿಸುವುದಾಗಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಹೊರವಲಯದಲ್ಲಿರುವ ಅತ್ತಿಗಿರಿಕೊಪ್ಪದ ಕೆರೆಯಲ್ಲಿ 25 ಕೊಳವೆ ಬಾವಿಗಳನ್ನು ಕೊರೆಸಿ ನಾಗರಿಕರಿಗೆ ನೀರು ಪೂರೈಸಲು ಮುಖ್ಯಮಂತ್ರಿ ಬಳಿ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿತ್ತು. ಕೆರೆಯಲ್ಲಿ ಬೋರ್ ಕೊರೆಸುವ ಕಾರ್ಯಕ್ಕೆ ಶಾಸಕರು ಚಾಲನೆ ನೀಡಿದರು. ಈ ವೇಳೆ ಪುರಸಭೆ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಸದಸ್ಯರಾದ ಶಫಿ, ರಾಜಣ್, ವೆಂಕಟೇಶ್ಗೌಡ,ಬಿ.ಸಿ. ಮೂರ್ತಿ, ವೇದಾವತಿ ಪ್ರಭಾಕರ್ ಇದ್ದರು.