ಕೋಲಾರ

ರೈತರಿಗೆ ತೊಂದರೆ ನೀಡುವ ಉದ್ದೇಶವೇ?

Published On :

ಕೆಜಿಎಫ್: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೆಸ್ಕಾಂ ಇಲಾಖೆ ವತಿಯಿಂದ ಸಮರ್ಪಕವಾಗಿ ವಿದ್ಯುತ್ ಪೂರೈಸುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕಳೆದ ಹತ್ತಾರು ವರ್ಷಗಳಿಂದ ಜಿಲ್ಲೆಯಲ್ಲಿ ಮಳೆಯಿಲ್ಲದೆ ಇರುವ ಅಲ್ಪಸ್ವಲ್ಪ ನೀರನ್ನು ರೈತರು ಕೃಷಿಕರು ಬೆಳೆಗಳನ್ನು ಬೆಳೆಯಲು ಪರದಾಡುವಂತಹ ಪರಿಸ್ಥಿತಿ ಇದೆ. ಬೆಸ್ಕಾಂ ಇಲಾಖೆ ಅಧಿಕಾರಿಗಳು ದಿನದಲ್ಲಿ ಹತ್ತಾರು ಭಾರಿ ವಿದ್ಯುತ್ ಕಡಿತಗೊಳಿಸುತ್ತಿದ್ದಾರೆ. ರೈತರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಬೆಸ್ಕಾಂ ಇಲಾಖೆ  ಅಧಿಕಾರಿಗಳ ವಿರುದ್ಧ ಘೋಷಣೆ  ಕೂಗಿ ಪ್ರತಿಭಟಿಸಿದರು.
ದುರಸ್ತಿಗೊಳಿಸಿ: ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಈ ಕೂಡಲೇ ಕ್ಷೇತ್ರದಲ್ಲಿ ದಿನಕ್ಕೆ ನಿರಂತರ 10 ಗಂಟೆಗಳ ಕಾಲ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ದುರಸ್ತಿಗೊಂಡಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ದುರಸ್ಥಿಗೊಳಿಸಬೇಕು, ಅಕ್ರಮ ಪಂಪ್‌ಸೆಟ್‌ಗಳು ಸಕ್ರಮಗೊಳಿಸಬೇಕು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.