ಪ್ರತಿಭೆ ಹಣದಿಂದ ಅಳೆಯಲಾಗದು: ನವೀನ್
ಚಿಕ್ಕಬಳ್ಳಾಪುರ: ಪ್ರತಿಭೆಯನ್ನು ಹಣದಿಂದ ಅಳೆಯಲಾಗದು, ಬೆಲೆ ಕಟ್ಟಲಾಗದು ಎಂದು ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ತಿಳಿಸಿದರು.
ನಗರದ ಶ್ರೀಯೋಗಿ ನಾರಾಯಣ ಮಠದಲ್ಲಿ ಶ್ರೀಯೋಗಿ ನಾರಾಯಣ ಪ್ರತಿಭಾ ಪುರಸ್ಕಾರ ಸಮಿತಿಯು ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ಬಲಿಜ ಜನಾಂಗದ ವಿದ್ಯಾರ್ಥಿಗಳನ್ನು ಪುರಸ್ಕರಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಲಿಜ ಜನಾಂಗದಲ್ಲಿ ಒಗ್ಗಟಿನ ಕೊರತೆ ಇದೆ. ಜನಾಂಗದಲ್ಲಿ ಹಲವು ವಿದ್ಯಾರ್ಥಿಗಳು ಆರ್ಥಿಕ ಪರಿಸ್ಥಿತಿ ಸರಿ ಇಲ್ಲದೇ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೆ.ವಿ. ವಿದ್ಯಾಸಂಸ್ಥೆ ವತಿಯಿಂದ ಜನಾಂಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ಒದಗಿಸಿಕೊಡಲಾಗುವುದು. ಜಿಲ್ಲೆಯ ಬಾಗೇಪಲ್ಲಿ, ಚಿಕ್ಕಬಳ್ಳಾಪುರದಲ್ಲಿ ಜನಾಂಗದವರು ಹೆಚ್ಚಾಗಿದ್ದರೂ ಜನಾಂಗದ ಒಗ್ಗಟಿಲ್ಲದೇ ಇರುವುದರಿಂದ ರಾಜಕೀಯದಲ್ಲಿ ಉನ್ನತ ಸ್ಥಾನಮಾನಗಳು ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ಜನಾಂಗದವರು ಒಟ್ಟಿಗೆ ಸೇರಿ ಜನಾಂಗದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದರು. ಜಿ.ಪಂ. ಮಾಜಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಮಾತನಾಡಿ, ಜನಾಂಗಕ್ಕೆ ಸರ್ಕಾರದಿಂದ ನೆರವು ಸರಿಯಾಗಿ ದೊರೆಯುತ್ತಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

