ಅಭಿವೃದ್ಧಿ ಹರಿಕಾರ ಸಂಸದ ಕೆ.ಎಚ್. ಮುನಿಯಪ್ಪಗೆ ಸನ್ಮಾನ
ಬಂಗಾರಪೇಟೆ: ಅಭಿವೃದ್ಧಿ ಹರಿಕಾರ ಸಂಸದ ಕೆ.ಹೆಚ್. ಮುನಿಯಪ್ಪ ಅವರನ್ನು ತಾಲೂಕಿನ ದೋಣಿಮಡಗು ಪಂಚಾಯ್ತಿಯ ಜನರ ಪರವಾಗಿ ಮಾಜಿ ಜಿಪಂ ಸದಸ್ಯ ಟಿ. ಮುನಿರಾಜು ನೇತೃತ್ವದಲ್ಲಿ ಕಾರ್ಯಕರ್ತರು ಅದ್ಧೂರಿಯಾಗಿ ಸತ್ಕರಿಸಿದರು.
ಕೋಲಾರ ಜಿಲ್ಲೆಯಿಂದ ಸತತವಾಗಿ 7ನೇ ಬಾರಿ ಸಂಸದ ಸದಸ್ಯರಾಗಿ ಎರಡು ಬಾರಿ ಕೇಂದ್ರ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿ ವಿರೋಧಿ ಪಕ್ಷಗಳಿಂದಲೂ ಮೆಚ್ಚಿಗೆಗಳಿಸಿರುವ ಸಂಸದ ಕೆ.ಹೆಚ್. ಮುನಿಯಪ್ಪ ಜಿಲ್ಲೆಯ ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಕಾರ್ಯಕರ್ತರು ಆಶಿಸಿ ಸತ್ಕರಿಸಿದರು. ದೋಣಿಮಡಗು ಪಂಚಾಯ್ತಿ ತಾಲೂಕಿನಲ್ಲಿ ಅತ್ಯಂತ ಹಿಂದುಳಿದ ಪಂಚಾಯ್ತಿಯಾಗಿದ್ದು, ಇಲ್ಲಿನ ಗ್ರಾಮಸ್ಥರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ನಾಗರಿಕ ಅನುಕೂಲಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ,ಆದರೂ ಹಲವು ಸಮಸ್ಯೆಗಳು ಜೀವಂತವಾಗಿದೆ.
ವರ್ಷಕ್ಕೆ ಆರು ಬಾರಿ ತಮಿಳುನಾಡಿನಿಂದ ಆಹಾರ ಹುಡುಕಿಕೊಂಡು ಕಾಡಾನೆಗಳ ಹಿಂಡು ಬಂದು ರೈತರು ಬರದಲ್ಲಿ ಶ್ರಮವಹಿಸಿ ಬೆಳೆದಿರುವ ವಾಣಿಜ್ಯ ಬೆಳೆಗಳಾದ ಟೊಮೇಟೋ, ಭತ್ತ, ಪಪ್ಪಾಯ ಮತ್ತು ತೋಟಗಾರಿಕೆ ಬೆಳೆಗಳನ್ನು ನಾಶ ಮಾಡುತ್ತಿದೆ. ಮೊದಲೇ ಬರದಿಂದ ಬೆಂಡಾಗಿದ್ದವರನ್ನು ಮತ್ತಷ್ಟು ಕುಗ್ಗುವಂತೆ ಮಾಡಿದೆ, ರಾಜ್ಯ ಸರ್ಕಾರ ಪರಿಹಾರ ನೀಡಿದ್ದರೂ ಆನೆಗಳು ಶಾಶ್ವತವಾಗಿ ಗಡಿ ಗ್ರಾಮಗಳನ್ನು ಪ್ರವೇಶ ಮಾಡದಂತೆ ಕ್ರಮ ಕೈಗೊಳ್ಳಬೇಕು, ಅರಣ್ಯ ಇಲಾಖೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ತಂದು ಅಭಿವೃದ್ಧಿಗೊಳಿಸಬೇಕೆಂದು ಸಂಸದರಲ್ಲಿ ಮನವಿ ಮಾಡಿದರು. ಈ ವೇಳೆ ಜಿಪಂ ಮಾಜಿ ಸದಸ್ಯ ಮುನಿರಾಜು, ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎಂ. ಗೋಪಿನಾಥ್, ಜಯಣ್ಣ, ಟಿ.ರಾಮು, ನಾಗರಾಜ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

