ಕೋಲಾರ: ಕೆ.ಜಿ.ಎಫ್ ಪ್ರಾದೇಶಿಕ ಸಾರಿಗೆ ಇಲಾಖೆಗೆ ಕಾಯಂ ಅಧಿಕಾರಿಯನ್ನು ನೇಮಕ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಕೋಲಾರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಶಾಹೀದ್ ಶಹಜಾದ್ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೆಜಿಎಫ್ ಪ್ರಾದೇಶಿಕ ಸಾರಿಗೆ ಇಲಾಖೆ ವ್ಯಾಪ್ತಿಗೆ, ಕೆಜಿಎಫ್, ಬಂಗಾರಪೇಟೆ ಹಾಗೂ ಮಾಲೂರು ತಾಲೂಕು ಒಳಪಟ್ಟಿದ್ದು, ಕಚೇರಿಯಲ್ಲಿ ಕಾಯಂ ಸಾರಿಗೆ ಅಧಿಕಾರಿ ಇಲ್ಲದಿರುವುದರಿಂದ ವಾಹನ ಮಾಲೀಕರು ಹಾಗೂ ಚಾಲಕರು ಸಕಾಲಕ್ಕೆ ಯಾವುದೇ ದಾಖಲೆ ಪಡೆಯಲು ಸುಮಾರು ತಿಂಗಳು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾರೆಡ್ಡಿ, ಕೆಜಿಎಫ್ ಪ್ರಾದೇಶಿಕ ಕಚೇರಿಯಲ್ಲಿ ಶಾಶ್ವತ ಅಧಿಕಾರಿ ಇಲ್ಲದೇ ಇರುವುದು ನನ್ನ ಗಮನಕ್ಕೆ ಬಂದಿದೆ. ಶೀಘ್ರದಲ್ಲಿ ಅಧಿಕಾರಿಯನ್ನು ನೇಮಿಸಲಾಗುವುದು ಎಂದರು.
Advertisement