ಕೋಲಾರ: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಆಸ್ಪತ್ರೆಗಳಲ್ಲಿ ಬಡವರ ರಕ್ತವನ್ನು ಹೀರುತ್ತಿರುವ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಮಾಜ ಸೇನೆಯ ಕಾರ್ಯಕರ್ತರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭಲ್ಲಿ ಸಂಘದ ಅಧ್ಯಕ್ಷ ಸೂಲಿಕುಂಟೆ ಆನಂದ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಹಲವಾರು ಬಾರಿ ಮನವಿ ಮತ್ತು ಹೋರಾಟಗಳನ್ನು ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಗ್ರಾಮಾಂತರ ಪ್ರದೇಶಗಳಲ್ಲಿರುವ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆಗೆಂದು ಹೋದರೆ ಸರಿಯಾದ ರೀತಿಯಲ್ಲಿ ಸ್ವಂದನೆ ನೀಡದೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗೆ ಬಡ ರೋಗಿಗಳನ್ನು ಕಳುಹಿಸುತ್ತಿದ್ದಾರೆಂದು ಆರೋಪಿದರು.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರಾದ ಗೋಪಿನಾಥ್, ನಾಗರಾಜ್, ರಮೇಶ್, ಗೋವಿಂದ, ಅಂಬರೀಶ್, ರಾಜೇಶ್, ಯತೀಶ್, ಹುಳೇರಹಳ್ಳಿ ನಾಗರಾಜ್, ಮುಳಬಾಗಲು ಕಾರ್ತಿಕ್ ಇದ್ದರು.
Advertisement