ಕೋಲಾರ: ನಗರದ ಅರಳೇಪೇಟೆ ಮುಖ್ಯ ರಸ್ತೆ, ಸಿಂಡಿಕೇಟ್ ಬ್ಯಾಂಕ್ ಪಕ್ಕದ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ತೆರೆದ ಕೊಳವೆ ಬಾವಿ ಇದ್ದು, ಈ ರಸ್ತೆಯ ಪಕ್ಕದಲ್ಲೇ ಖಾಸಗಿ ಶಾಲೆ ಇದೆ. ಮಕ್ಕಳ ಸುರಕ್ಷತೆಗಾಗಿ ಕೂಡಲೇ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಬೇಕೆಂದು ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಪತ್ರಿಕಾ ಕಾರ್ಯದರ್ಶಿ ಎನ್. ಮಂಜುನಾಥ್ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕೊಳವೆ ಬಾವಿದುರಂತಗಳು ಹೆಚ್ಚಾಗುತ್ತಿವೆ. ಮಕ್ಕಳ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಅನಾಹುತ ಸಂಭವಿಸಿದ ಮೇಲೆ ಪಶ್ಚಾತಾಪಪಡುವುದರಿಂದ ಪ್ರಯೋಜನವಿಲ್ಲವೆಂದರು.
Advertisement