ಗುಡಿಬಂಡೆ: ಆ. 22ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಪಾಲ್ಗೊಳ್ಳಬೇಕೆಂದು ತಾಲೂಕು ಘಟಕದ ಅಧ್ಯಕ್ಷ ಕೆ.ವಿ. ನಾರಾಯಣ ಸ್ವಾಮಿ ಕೋರಿದ್ದಾರೆ. ಪಟ್ಟಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಭೆಯಲ್ಲಿ ಭಾಗವಹಿಸಿದ ಬಳಿಕ ನೌಕರರನ್ನು ಉದ್ದೇಶಿಸಿ ಮಾತನಾಡಿದರು. ನೌಕರರ ಸಂಘದ ರಾಜ್ಯಾಧ್ಯಕ್ಷ ಭೈರಪ್ಪ ಮಾತನಾಡಿ, ನೌಕರರ ಹಲವಾರು ಬೇಡಿಕೆಗಳನ್ನು ಸರ್ಕಾರದ ಜೊತೆ ಸಂಘರ್ಷಕ್ಕಿಳಿಯದೆ ಸೌಹಾರ್ದಯುತವಾಗಿ ಬಗೆಹರಿಸಿದ್ದಾರೆ. 7ನೇ ವೇತನ ಆಯೋಗ ಜಾರಿ ಸೇರಿದಂತೆ ನೌಕರರ ಹಲವಾರು ಬೇಡಿಕೆಗಳು ಈಡೇರಿಲ್ಲ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು ಸಮ್ಮೇಳನದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಅಗತ್ಯವಿದೆ. ಆದ್ದರಿಂದ ತಾಲೂಕಿನ ಎಲ್ಲಾ ನೌಕರ ಬಂಧುಗಳು ಸಮ್ಮೇಳನದ ಪ್ರತಿನಿಧಿ ಶುಲ್ಕವನ್ನು ಪಾವತಿಸಿ, ಕಡ್ಡಾಯವಾಗಿ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಹೇಳಿದರು. ಈ ವೇಳೆ ನೌಕರರ ಸಂಘದ ಪದಾಧಿಕಾರಿಗಳಾದ ಎನ್. ನಾರಾಯಣ ಸ್ವಾಮಿ, ಮುನಿಕೃಷ್ಣ ಮತ್ತಿತರರಿದ್ದರು.
Advertisement