ಕೋಲಾರ

ಉನ್ನತ ಶಿಕ್ಷಣದಲ್ಲಿ ಅಸಮಾನತೆ: ಕಳವಳ

Published On :

ಮುಳಬಾಗಲು: ದೇಶ ಉನ್ನತ ಶಿಕ್ಷಣದಲ್ಲಿ ಗಣನೀಯ ಸಾಧನೆ ಸಾಧಿಸಿದ್ದರೂ ಶೇ.85 ರಷ್ಟು ಪ್ರತಿಭಾವಂತ ಯುವ ಜನತೆಗೆ ಅವಕಾಶಗಳು ಸಿಕ್ಕಿಲ್ಲವೆಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುಣತ್ಮಕ ಶಿಕ್ಷಣದೊಂದಿಗೆ ಸಮಾನವಾದ ಶಿಕ್ಷಣ ಸಿಗಬೇಕು, ಆದರೆ ಶಿಕ್ಷಣದಲ್ಲಿ ಅಸಮಾನತೆ ಹೆಚ್ಚಿದೆ ಎಂದರು. ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರ ಸಿಗುತ್ತಿದ್ದು, ಗ್ರಾಮೀಣ ಬಡವರಿಗೆ, ಹಿಂದುಳಿದವರಿಗೆ ಸಿಗುತ್ತಿಲ್ಲದ ಕಾರಣ ಪ್ರತಿಭೆಗಳು ಬೆಳಕಿಗೆ ಬರುತ್ತಲ್ಲ. ದೇಶದ ಅಭಿವೃದ್ಧಿಗೆ ಯುವ ಜನತೆ ಪೂರಕವಾಗಿದ್ದು ಎಲ್ಲರಿಗೂ ಸಮಾನ ಶಿಕ್ಷಣ ಹಾಗೂ ಸಮಾನ ಅವಕಾಶ ಸಿಗದ ಹೊರತು ದೇಶದ ಅಭಿವೃದ್ಧಿ ಸಾಧ್ಯವಾಗದೆಂದು ಹೇಳಿದರು. ಬಿಡಿಎ ಅಧ್ಯಕ್ಷ ಪಿ.ಎನ್. ಶ್ರೀನಿವಾಸಾಚಾರಿ ಮಾತನಾಡಿ, ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಭವಿಷ್ಯದ ಮೈಲಿಗಲ್ಲಾಗಿದ್ದು ವಿದ್ಯಾರ್ಥಿಗಳು ಶ್ರಮವಹಿಸಿ ವ್ಯಾಸಂಗ ಮಾಡಲು ಕರೆ ನೀಡಿದರು. ಮುಖ್ಯ ಸಚೇತಕ ಎ.ಎಚ್. ಶಿವಯೋಗಿಸ್ವಾವು, ಜಿಲ್ಲಾಧಿಕಾರಿ ಡಿ.ಕೆ. ರವಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.