ಫುಟ್ಪಾತ್ ವ್ಯಾಪಾರಿಗಳ ಪ್ರತಿಭಟನೆ
ಕೋಲಾರ: ನಗರದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಬೀದಿ ವ್ಯಾಪಾರಿಗಳಿದ್ದು ನಗರಸಭೆಯವರು ಅಂಗಡಿಗಳ ತೆರುವುಗೊಳಿಸಲು ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಬಡವರಿಗೆ ತೊಂದರೆ ಆಗುತ್ತಿದೆ ಎಂದು ಬೀದಿ ವ್ಯಾಪಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಅಂಗಡಿಗಳನ್ನು ತೆರುವುಗೊಳಿಸುವುದರಿಂದ ಬಡವರು ಬೀದಿಪಾಲಾಗುತ್ತಾರೆಂದು ಜಿಲ್ಲಾಧಿಕಾರಿ ಡಿ.ಕೆ. ರವಿ ಅವರಿಗೆ ಮನವಿ ಸಲ್ಲಿಸಿದರು. ಬೀದಿ ವ್ಯಾಪಾರಿಗಳಿಗೆ ಪುನರ್ ವಸತಿ ಸೌಲಭ್ಯ ಕಲ್ಪಿಸಿ ನಂತರ ಬೀದಿ ವ್ಯಾಪಾರ ತಡೆಯಲಿ ಎಂದು ಮುಖಂಡ ವೆಂಕಟಪತಿಯಪ್ಪ ಒತ್ತಾಯಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಕೆ. ರವಿ, ಕೂಡಲೇ ಇದನ್ನು ಪರಿಶೀಲಿಸಿ ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಜಿಪಂ ಬಳಿಯಿಂದ ನಿರ್ಗಮಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

