ಶಾಸಕ ನರೇಂದ್ರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹ
ಶಿಡ್ಲಘಟ್ಟ: ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಮೇಲೆ ಹಲ್ಲೆಗೆ ಮುಂದಾಗಿರುವ ಶಾಸಕ ಪಿ.ಎಂ. ನರೇಂದ್ರಸ್ವಾಮಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಜೊತೆ ದ್ವನಿಗೂಡಿಸಿದ್ದ ಶಾಸಕ ನರೇಂದ್ರಸ್ವಾಮಿ ತಾಳ್ಮೆ ಕಳೆದುಕೊಂಡು ಸಚಿವ ಎಚ್. ಆಂಜನೇಯ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವುದನ್ನು ಖಂಡಿಸುತ್ತೇವೆ, ಜನಪ್ರತಿನಿಧಿಗಳ ವರ್ತನೆ ಖಂಡನೀಯವಾಗಿದೆ. ಕೂಡಲೇ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಶಿಡ್ಲಘಟ್ಟ ತಾಲೂಕಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದರು. ಎಚ್. ರಾಮಾಂಜನೇಯಪ್ಪ, ಕೆ. ಮಂಜುನಾಥ್, ಎಸ್.ಪ್ರಭಾಕರ್, ವೈ. ನರಸಿಂಹಮೂರ್ತಿ, ಎಂ. ನರಸಿಂಹಮೂರ್ತಿ, ಕದಿರಪ್ಪ, ಸುಭ್ರಮಣಿ, ತಿರುಮಲಪ್ರಕಾಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

