ಕೋಲಾರ

ಅಪಘಾತದಲ್ಲಿ ಛಾಯಾಗ್ರಾಹಕಗಾಯ

Published On :

ಶಿಡ್ಲಘಟ್ಟ: ಡಿಬ್ಬೂರಹಳ್ಳಿ - ಚಿಂತಾಮಣಿ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಟ್ರ್ಯಾಕ್ಟರ್ ಹರಿದ ಪರಿಣಾಮ ಕಾಲು ತುಂಡಾಗಿರುವ ಘಟನೆ ನಡೆದಿದೆ.
   ಕೃಷ್ಣಪ್ಪ ಅಪಘಾತಕ್ಕೆ ತುತ್ತಾದ ದುರ್ದೈವಿಯಾಗಿದ್ದಾನೆ. ಇವರು ಛಾಯಾಗ್ರಾಹಕರಾಗಿದ್ದು ಡಿಬ್ಬೂರಹಳ್ಳಿಯಿಂದ ಚಿಂತಾಮಣಿಗೆ ಹೋಗುವ ಮಾರ್ಗ ಮಧ್ಯೆ ಅಪಘಾತ ಸಂಬವಿಸಿದೆ. ಇವರನ್ನು ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್. ರಾಮಯ್ಯ  ಆಸ್ಪತ್ರೆಗೆ ಕಳುಹಿಸಲಾಗಿದೆ.
    ಶಿಡ್ಲಘಟ್ಟ ತಾಲ್ಲೂಕು ಛಾಯಾಗ್ರಾಹಕರ ಸಂಘದ ಗೌರವಾಧ್ಯಕ್ಷ ರೂಪಸಿ ರಮೇಶ್, ಅಧ್ಯಕ್ಷ ಶ್ರೀನಿವಾಸ್ ಕೂಡಲೇ ಸ್ಥಳಕ್ಕೆ ದಾವಿಸಿ ಚಿಕಿತ್ಸೆಗೆ ಬೇಕಾದ ನೆರವು ನೀಡಿದ್ದಾರೆ. ದಿಬ್ಬೂರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.