ಕೋಲಾರ

ಕಾಮಗಾರಿಗೆ ಗುದ್ದಲಿ ಪೂಜೆ

Published On :

ಚಿಕ್ಕನಾಯಕನಹಳ್ಳಿ: ತಾಲೂಕಿನ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ನೀಡಿದ್ದು ಜನತೆ ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಸಿ.ಬಿ.ಸುರೇಶ್ಬಾಬು ನುಡಿದರು. ಅವರು ಶನಿವಾರ ತಾಲೂಕಿನ ಶೆಟ್ಟೀಕೆರೆ ಮತ್ತು ದುಗಡೀಹಳ್ಳಿ ಗ್ರಾಮಪಂಚಾಯ್ತಿಯ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿವ ನೀರಿನ ಯೋಜನೆ ಮತ್ತು ನಮ್ಮ ಊರು ನಮ್ಮ ರಸ್ತೆ ಅನುದಾನದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಅದರ ಪರಿಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಜೊತೆಗೆ ಹಳ್ಳಿಗಳಿಂದ ಹಳ್ಳಿಗೆ ರಸ್ತೆ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗುವುದು. ಗ್ರಾಮೀಣ ಪ್ರದೇಶ ಅಭಿವೃದ್ಧಿ ಹೊಂದಬೇಕಾದರೆ ರಸ್ತೆ ಸೌಲಭ್ಯ ಅತ್ಯಗತ್ಯವಾಗಿದೆ. ನಮ್ಮ ಊರು ನಮ್ಮ ರಸ್ತೆ, ಕುಡಿಯುವ ನೀರಿನ ಯೋಜನೆಯಲ್ಲಿ ಟ್ಯಾಂಕುಗಳನ್ನು ನಿರ್ಮಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದರು.
ನ್ಯೂಯಾರ್ಕ್ ಕುಸ್ತಿಗೆ ಲಕ್ಷ್ಮೀಕಾಂತ್
ಮಧುಗಿರಿ: ಪಟ್ಟಣದ ಗೌತಂ ಬುದ್ಧ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಬಿ.ಎಚ್. ಲಕ್ಷ್ಮೀಕಾಂತ 2014ರ ಮೇ ತಿಂಗಳು ನ್ಯೂಯಾರ್ಕ್ನಲ್ಲಿ  ನಡೆಯಲಿರುವ 46 ಕೆಜಿ ಒಳಗಿನ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಈತ ಜ.30, 31ರಂದು ನವದೆಹಲಿಯಲ್ಲಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ 46 ಕೆಜಿ ಒಳಗಿನ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಆಟೋ ಹಾವಳಿ ತಡೆಗಟ್ಟಲು ಒತ್ತಾಯ
ತಿಪಟೂರು:  ತಾಲೂಕಿನ ನೊಣವಿನಕೆರೆ ಹೋಬಳಿ ಕೇಂದ್ರ ಶೈಕ್ಷಣಿಕ ಮತ್ತು ಪ್ರತಿಷ್ಠಿತ ವ್ಯಾಪಾರ ಸ್ಥಳವಾಗಿದ್ದು ಇಲ್ಲಿ ನಾಡ ಕಚೇರಿ, ಕೆಪಿಟಿಸಿಎಲ್, ಪ್ರಾಥಮಿಕ ಆರೋಗ್ಯ ಕೇಂದ್ರ, ಹೆರಿಗೆ ಆಸ್ಪತ್ರೆ, ಪೊಲೀಸ್ ಠಾಣೆ, ಬ್ಯಾಂಕ್ಗಳು, ಸರ್ಕಾರಿ ಪದವಿ ಪೂರ್ವ, ಡಿಗ್ರಿ ಕಾಲೇಜುಗಳು, ಸರ್ಕಾರಿ ಪ್ರೌಢಶಾಲೆಗಳು, ಕೃಷಿ ರೈತ ಸಂಪರ್ಕ ಕೇಂದ್ರ, ದೂರವಾಣಿ ಕೇಂದ್ರ, ಅಂಚೆ ಕಚೇರಿ ಇನ್ನೂ ಮುಂತಾದ ಸರ್ಕಾರಿ ಸೌಲಭ್ಯಗಳಿದ್ದು ಇಲ್ಲಿಗೆ ಸುತ್ತಮುತ್ತಲಿನ 30-40 ಹಳ್ಳಿಗಳಿಂದ ದಿನನಿತ್ಯ ನೂರಾರು ಸಾರ್ವಜನಿಕರು, ವಿದ್ಯಾರ್ಥಿಗಳು ಬಂದು ಹೋಗುತ್ತಿರುತ್ತಾರೆ.  ನೊಣವಿನಕೆರೆ ಹೋಬಳಿ ಕೇಂದ್ರಕ್ಕೆ ತುರುವೇಕೆರೆ ಹಾಗೂ ತಿಪಟೂರು ಮತ್ತು ತುರುವೇಕೆರೆ ಬಸ್ ಡಿಪೋದಿಂದ ನೊಣವಿನಕೆರೆ ಮಾರ್ಗವಾಗಿ ಸುತ್ತಮುತ್ತಲಿನ ಹಳ್ಳಿಗಳಿಗೆ ಬಸ್ ಸಂಚಾರವಿದ್ದು ಇದರಿಂದ ಶಾಲಾ ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ ಕೂಲಿ ಕಾರ್ಮಿಕರಿಗೆ ಮತ್ತು ರೈತರು ಬೆಳೆದ ಹಣ್ಣು ತರಕಾರಿಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗಿರುತ್ತದೆ. ಆದರೆ ಇತ್ತೀಚಿಗೆ ಆಟೋ ಹಾವಳಿ ವಿಪರೀತವಾಗಿದ್ದು,ಇದಕ್ಕೆ ಕಡಿವಾಣ ಹಾಕುವುದು ಅಗತ್ಯ ಎಂದು ಈ ಭಾಗದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.