ಕೋಲಾರ

ತಾಲೂಕು ಮಟ್ಟದ ಯುವಜನ ಮೇಳ

Published On :

ಕೋಲಾರ: ಇಂದಿನ ಯುವಕರು ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮುಂದೆ ಸಾಗಬೇಕು ಎಂದು ತಾಲೂಕು ಪಂಚಾಯ್ತಿ ಉಪಾಧ್ಯಕ್ಷರಾದ ಸರಸ್ವತಿ ಮುನಿಕೃಷ್ಣಪ್ಪನವರು ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಮುದುವತ್ತಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿ ಪಂ, ತಾಪಂ, ಯುವ ಸಬಲೀಕರಣ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಬಾಲಾಜಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಲಾ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಕೋಲಾರ ತಾಲೂಕು ಮಟ್ಟದ ಯುವಜನ ಮೇಳ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುದುವತ್ತಿ ಗ್ರಾಪಂ ಅಧ್ಯಕ್ಷ ಅಶ್ವಥಮ್ಮ ವಹಿಸಿದ್ದರು.
ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಯಳಬುರ್ಗಿ ನಾರಾಯಣಸ್ವಾಮಿ ಮಾತನಾಡಿ, ಇಂದಿನ ಯುವಕರು  ಕೆಟ್ಟಚಟಗಳಿಗೆ ದಾಸರಾಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದು, ಆರೀತಿ ಮಾಡದೇ ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಮುಂಬರುವ ದಿನಗಳಲ್ಲಿ ತಮ್ಮ ಜೀವನವನ್ನು ಸಾಕಾರಗೊಳಿಸಿಕೊಳ್ಳುವತ್ತ ದಾಪುಗಾಲು ಹಾಕಬೇಕಿದೆ ಎಂದು ಕರೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.