ಕೋಲಾರ

ದೇವರ ಕಿರೀಟ ಕಳವು

Published On :

ಕೆಜಿಎಫ್: ಬೆಳಗ್ಗೆ 6 ಗಂಟೆಗೆ ದೇವಸ್ಥಾನಕ್ಕೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ದೇವರ ವಿಗ್ರಹಕ್ಕೆ ಇಟ್ಟಿದ್ದ ಮೂರು ಬೆಳ್ಳಿ ಕಿರೀಟಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಆಂಡ್ರಸನ್ಪೇಟೆ ಠಾಣಾ ಸಮೀಪವೇ ನಡೆದಿದೆ.
ಆಂಡ್ರಸನ್ ಪೇಟೆ ಬಜಾರ್ ಪಕ್ಕದಲ್ಲೇ ಇರುವ ಶ್ರೀ ಭಗವಾನ್ ಮಹಾವೀರ್ ಜೈನ್ ದೇವಾಲಯದಲ್ಲಿ ಅರ್ಚಕರು ದೇವರ ವಿಗ್ರಹಗಳನ್ನು ತೊಳೆಯಲು ಮೂರು ಬೆಳ್ಳಿ ಕಿರೀಟ ತೆಗೆದು ಪಕ್ಕದಲ್ಲಿ ಇಟ್ಟು ನೀರು ತರುಲು ಹೋಗಿದ್ದ ಸಮಯದಲ್ಲಿ ದೇವಸ್ಥಾನದೊಳಕ್ಕೆ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಸುಮಾರು 75 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಪುರಾತನ ಕಾಲದ ಬೆಳ್ಳಿ ಕಿರೀಟಗಳನ್ನು ಕಳವು ಮಾಡಿದ್ದಾನೆ ಎಂದು ದೇವಸ್ಥಾನದ ಅರ್ಚಕ ನಾಗರಾಜ್ ಆಂಡ್ರಸನ್ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.