'ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೇಡ'
ಚಿಂತಾಮಣಿ: ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ ರೈತರಿಗೆ ಸಹಕಾರದಿಂದ ಸಿಗುವ ಸಾಲ ಸೌಲತ್ತು ದೊರೆಯಲಿ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸತ್ಯನಾರಾಯಣ ಮಹೇಶ್ ಹೇಳಿದರು.
ನಗರದ ಹೊರವಲಯದ ಕುರುಟಹಳ್ಳಿಯಲ್ಲಿ ನೂತನ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿ ಸಹಕಾರ ಕ್ಷೇತ್ರದಲ್ಲಿ ಗ್ರಾಮೀಣ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರದಿಂದ ಸಿಗುವ ಸೌಲತ್ತು ಸದುಪಯೋಗ ಪಡಿಸಿಕೊಳ್ಳಲು ರಾಜಕೀಯ ಬೆರೆಸದೆ ಒಮ್ಮತದಿಂದ ಸಹಕಾರ ಸಂಘ ಬೆಳೆಸಬೇಕೆಂದು ಕೋರಿದರು. ತಾಪಂ ಮಾಜಿ ಸದಸ್ಯ ಆರ್. ರಾಧಕೃಷ್ಣ ಮಾತನಾಡಿ, ಎಲ್ಲ ವರ್ಗದ ರೈತರಿಗೂ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ದೊರೆಯುವ ಸೌಲತ್ತು ಸಿಕ್ಕಿ ಮಾದರಿ ಸೇವಾ ಸಹಕಾರ ಎಂಬ ಖ್ಯಾತಿಗೆ ಒಳಪಡಲು ಎಲ್ಲರ ಸಹಕಾರ ಅಗತ್ಯವೆಂದು ಸಲಹೆ ನೀಡಿದರು. ನೂತನ ಅಧ್ಯಕ್ಷ ವಿ. ಮಂಜುನಾಥ ಮಾತನಾಡಿದರು. ನಾ. ಶಂಕರ್, ಪ್ರಕಾಶ್ ಗುಪ್ತ, ಸುಜಾತಮ್ಮ ಶಿವಣ್ಣ, ಕೆ.ಎಂ. ಕೃಷ್ಣಮೂರ್ತಿ, ಶ್ರೀನಿವಾಸ, ಕೆ.ಎಸ್. ಅಶೋಕ, ಮಾಡಿಕೆರೆ ಅರುಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

