ಎಲ್ಲರಿಗೂ ಕಾನೂನು ಅರಿವು ಅಗತ್ಯ
ಕೋಲಾರ: ಭೂಮಿಯ ಮೇಲಿನ ಸಕಲ ಜೀವರಾಶಿಗಳಿಗೆ ಜೀವಿಸುವ ಹಕ್ಕು ಇದೆ. ಇದಕ್ಕೆ ಯಾರಿಂದಲಾದರೂ ಧಕ್ಕೆ ಉಂಟಾದಲ್ಲಿ ಕಾನೂನು ಮೂಲಕ ಸಮಸ್ಯೆ ನಿವಾರಣೆ ಮಾಡಿಕೊಳ್ಳುವುದಕ್ಕೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೇಣುಕಾ ಪ್ರಸಾದ್ ತಿಳಿಸಿದರು.
ನಗರದ ಟಿ. ಚನ್ನಯ್ಯರಂಗ ಮಂದಿರದಲ್ಲಿ ಭಾನುವಾರ ಮಾನವ ಹಕ್ಕುಗಳ ಜಾಗೃತಿ ಸಮಿತಿ ಜಿಲ್ಲಾ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಸಹಾಯಕರು, ದೌರ್ಜನಕ್ಕೆ ಒಳಗಾದವರು, ಅಬಲೆಯರು ಸೇರಿದಂತೆ ಎಲ್ಲ ವರ್ಗದ ಜನತೆಗೆ ಕಾನೂನು ಅರಿವು ಅತ್ಯಗತ್ಯ. ಇದಕ್ಕಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು, ಯಾರಿಂದಲಾದರೂ ಕಷ್ಟ ಎದುರಾದಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಸಿಗುವ ಉಚಿತ ಕಾನೂನು ನೆರವು ಮೂಲಕ ಪರಿಹಾರ ಕಂಡುಕೊಂಡು ಸಮಾಜದಲ್ಲಿ ಶಾಂತಿ-ನೆಮ್ಮದಿಯಿಂದ ಜೀವನ ಮಾಡುವುದಕ್ಕೆ ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.
ಅಸಹಾಯಕರು, ದೌರ್ಜನಕ್ಕೆ ಒಳಗಾದವರು, ಅಬಲೆಯರು ಸೇರಿದಂತೆ ಎಲ್ಲ ವರ್ಗದ ಜನತೆಗೆ ಕಾನೂನು ಅರಿವು ಅತ್ಯಗತ್ಯ.
ಟಿ ನ್ಯಾ. ರೇಣುಕಾ ಪ್ರಸಾದ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

